ಯಳಂದೂರು: ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಬಿಳಿಗಿರಿರಂಗನ ಬೆಟ್ಟದ ಶ್ರೀ ಬಿಳಿಗಿರಿ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಗುರುವಾರ ಹುಂಡಿ ಎಣಿಕೆ ನಡೆಯಿತು.
ಇಂದು ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆದ ಹುಂಡಿ ಎಣಿಕೆಯಲ್ಲಿ ಒಟ್ಟು ರೂ. 18,69,414 (ಹದಿನೆಂಟು ಲಕ್ಷ ಅರವತ್ತೊಂಬತ್ತು ಸಾವಿರದ ನಾನೂರ ಹದಿನಾಲ್ಕು ರೂಪಾಯಿ) ನಗದು ಸಂಗ್ರಹವಾಗಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.
ಎಣಿಕೆ ಕಾರ್ಯದಲ್ಲಿ ದೇವಸ್ಥಾನ ಸಮಿತಿ ಪದಾಧಿಕಾರಿಗಳು, ದೇವಸ್ಥಾನದ ಸಿಬ್ಬಂದಿಗಳು, ಬ್ಯಾಂಕ್ ಸಿಬ್ಬಂದಿಗಳು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು. ಮುಜರಾಯಿ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಪಾರದರ್ಶಕವಾಗಿ ಎಣಿಕೆ ಕಾರ್ಯ ನಡೆಸಲಾಯಿತು.




