Mysore
28
broken clouds

Social Media

ಭಾನುವಾರ, 15 ಫೆಬ್ರವರಿ 2026
Light
Dark

ಸಫಾರಿ ವಾಹನ ಡಿಕ್ಕಿ : ಹಸು ಸಾವು

Cow dies after being hit by safari vehicle

ಹನೂರು : ರಸ್ತೆಯಲ್ಲಿ ಹೋಗುತ್ತಿದ್ದ ಹಸುವಿಗೆ ಅರಣ್ಯ ಇಲಾಖೆಯ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.

ಲೊಕ್ಕನಹಳ್ಳಿ ಗ್ರಾಪಂ ವ್ಯಾಪ್ತಿಯ ಆಂಡಿಪಾಳ್ಯ ಗ್ರಾಮದ ಬಳಿ ನಾಗರಾಜು ಎಂಬುವವರಿಗೆ ಸೇರಿದ ಹಸು ಬೆಳಿಗ್ಗೆ 10 ಗಂಟೆಯ ವೇಳೆ ರಸ್ತೆಯಲ್ಲಿ ಹೋಗುತ್ತಿದ್ದಾಗ ಅರಣ್ಯ ಇಲಾಖೆಯ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಸು ಸ್ಥಳದಲ್ಲಿಯೇ ಮೃತಪಟ್ಟಿದೆ. ಆದರೂ ಸ್ಥಳಕ್ಕೆ ಅರಣ್ಯ ಇಲಾಖೆಯ ಯಾವೊಬ್ಬ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ನೀಡಿಲ್ಲ ಎಂದು ಹಸುವಿನ ಮಾಲೀಕರು ಹಾಗೂ ಗ್ರಾಮಸ್ಥರು ಆರೋಪಿಸಿ ಸಫಾರಿ ವಾಹನವನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.

ನಂತರ ಹಸುವಿನ ಮಾಲೀಕ ನಾಗರಾಜು ಮಾತನಾಡಿ, ಸಾಮಾನ್ಯ ಜನರು ವನ್ಯಪ್ರಾಣಿಗೆ ಡಿಕ್ಕಿ ಹೊಡೆದು ಮೃತಪಟ್ಟಿದ್ದರೆ ಅವರ ಮೇಲೆ ಪ್ರಕರಣ ದಾಖಲು ಮಾಡುತ್ತೀರಾ, ಆದರೆ ಹಸು ಸತ್ತು ಆರು ಗಂಟೆಯಾದರೂ ಯಾವೊಬ್ಬ ಅಧಿಕಾರಿಯೂ ಬಂದಿಲ್ಲ. ಕಾನೂನು ನಿಮಗೆ ಒಂದು ನಮಗೆ ಒಂದು ಇದೆಯೇ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಹಾರ ನೀಡಬೇಕು, ಚಾಲಕನ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Tags:
error: Content is protected !!