ಗುಂಡ್ಲುಪೇಟೆ : ತಾಲ್ಲೂಕಿನ ಆಲತ್ತೂರು ಗ್ರಾಮದ ಮಲ್ಲೇಶ್ ಎಂಬವರ ಜಮೀನಿನಲ್ಲಿ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ.
ಶುಕ್ರವಾರ ಬೆಳಿಗ್ಗೆ ಜಮೀನಿನಲ್ಲಿ ಹಸು ಮೇಯಿಸುತ್ತಿದ್ದ ಸಂದರ್ಭದಲ್ಲಿ ಹುಲಿ ದಾಳಿ ಮಾಡಿದ್ದು, ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಹುಲಿ ದಾಳಿಯಿಂದ ಭೀತಿಗೊಂಡಿರುವ ಆಲತ್ತೂರು ಕೆರೆ ಸುತ್ತಮುತ್ತಲಿನ ಜನರು ಜಮೀನಿಗೆ ತೆರಳಲು ಭಯಪಡುತ್ತಿದ್ದಾರೆ.
ಅರಣ್ಯ ಇಲಾಖೆ ಕೂಡಲೇ ಹುಲಿಯನ್ನು ಸೆರೆಹಿಡಿಯಬೇಕು ಹಾಗೂ ಹಸು ಕಳೆದುಕೊಂಡ ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನು ಓದಿ: ಬಂಡವಾಳ ಹೂಡಿಕೆ ವಾತಾವರಣ ನಿರ್ಮಿಸಿ : ಸಭೆಯಲ್ಲಿ ಸಿಎಂ ಸೂಚನೆ ; ಹೀಗಿವೆ ಇತರೆ ಮುಖ್ಯಾಂಶಗಳು
ಚಿರತೆ ದಾಳಿಗೆ ಕರು ಬಲಿ
ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದ ಮಲ್ಲೇಶ್ ಎಂಬವರ ತೋಟದ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಕರುವನ್ನು ಚಿರತೆ ದಾಳಿ ನಡೆಸಿ ಕೊಂದುಹಾಕಿದೆ.
ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಹುಲಿ, ಚಿರತೆ ದಾಳಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪ್ರತಿನಿತ್ಯ ಜಾನುವಾರುಗಳನ್ನು ಕೊಂದುಹಾಕುತ್ತಿವೆ. ಅರಣ್ಯ ಇಲಾಖೆ ಕಾಡುಪ್ರಾಣಿಗಳ ನಿಯಂತ್ರಣ ಮಾಡುವಲ್ಲಿ ವಿಫಲವಾಗಿದೆ. ಅಲ್ಲದೆ ರೈತರಿಗೆ ಪರಿಹಾರ ನೀಡಲು ವಿಳಂಬ ಮಾಡುತ್ತಿದೆ ಎಂದು ರೈತ ಮುಖಂಡ ನಾಗಾರ್ಜುನ್ ಆರೋಪಿಸಿದ್ದಾರೆ.





