ಚಾಮರಾಜನಗರ

ದಂಟಳ್ಳಿ ಗ್ರಾಮದಲ್ಲಿ ಮೊಸಳೆಗಳು ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು

ಹನೂರು: ತಾಲ್ಲೂಕಿನ ದಂಟಳ್ಳಿ ಗ್ರಾಮದ ಕೆರೆಯಲ್ಲಿ ಎರಡು ಮೊಸಳೆಗಳು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿರುವ ಘಟನೆ ಜರುಗಿದೆ.

ಹನೂರು ತಾಲ್ಲೂಕಿನ ದಂಟಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಕೆರೆಯಲ್ಲಿ ಎರಡು ಮೊಸಳೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ತಮ್ಮ ಜಾನುವಾರುಗಳನ್ನು ನೀರು ಕುಡಿಸಲು ಹೋದಾಗ ಕಂಡುಬಂದಿರುವ ದೃಶ್ಯ ಕಂಡು ಜನರು ಆತಂಕಕ್ಕೆ ಒಳಗಾಗಿದ್ದಾರೆ

ಕೆರೆಯತ್ತ ತೆರಳಲು ರೈತರು ಹಿಂದೇಟು: ಕೆರೆಯ ದಡದಲ್ಲಿ ಮೊಸಳೆಗಳು ಮಲಗಿರುವುದನ್ನು ಕಂಡಂತಹ ರೈತರು ಮತ್ತು ಗ್ರಾಮಸ್ಥರು ಭಯಬೀತರಾಗಿದ್ದಾರೆ. ಇದರಿಂದಾಗಿ ಅಲ್ಲಿನ ರೈತರು ಗ್ರಾಮಸ್ಥರು ಮೊಸಳೆ ಹಿಡಿಯಲು ಒತ್ತಾಯಿಸಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗ್ರಾಮದ ಕೆರೆಯಲ್ಲಿರುವ ಮೊಸಳೆಗಳನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಡುವಂತೆ ಆಗ್ರಹ ಮಾಡಿದ್ದಾರೆ.

ಈ ನಡುವೆ ಅರಣ್ಯದಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿಯ ನಡುವೆ ಕ್ರೂರ ಪ್ರಾಣಿಗಳಾದ ಹುಲಿ ಚಿರತೆ ಕಾಡು ಹಂದಿಗಳು ಕಾಡಾನೆ ಸರದಿಯ ನಂತರ ಮೊಸಳೆ ಗ್ರಾಮಗಳಲ್ಲಿ ಕಂಡುಬಂದಿರುವುದು ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

7 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

8 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

10 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

10 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

10 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

17 hours ago