ಚಾಮರಾಜನಗರ: ಅಕಾಲಿಕ ಮಳೆಯಿಂದ ಬೆಳೆ ನಷ್ಟವಾಗಿರುವ ಹಿನ್ನೆಲೆಯಲ್ಲಿ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯಾಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಚಾಮರಾಜನಗರದ ಚಾಮರಾಜೇಶ್ವರಿ ಉದ್ಯಾನವನದ ಹತ್ತಿರ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಅವರು, ಕಳೆದ 17 ಮತ್ತು 18 ದಿನಾಂಕ ರಂದು ರಾಜ್ಯಾದ್ಯಂತ ಹಾಗೂ ಚಾಮರಾಜನಗರ ಜಿಲ್ಲೆ ವ್ಯಾಪ್ತಿಯಲ್ಲಿ ಆಕಾಲಿಕ ಆಲಿಕಲ್ಲು ಮಳೆ ಸುರಿದ ಪರಿಣಾಮ ತೋಟಗಾರಿಕೆ ಬೆಳೆಗಳು ಸಂಪೂರ್ಣ ನಾಶವಾಗಿವೆ. ಚಾಮರಾಜನಗರ ಜಿಲ್ಲೆಯಲ್ಲೇ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗಳು ನಷ್ಟವಾಗಿದೆ. ಆದ್ದರಿಂದ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು.
ಸಂಬಂಧಪಟ್ಟ ಜಿಲ್ಲಾಡಳಿತ ಕಂದಾಯ ಮತ್ತು ತೋಟಗಾರಿಕೆ ಇಲಾಖೆಯ ಜಂಟಿ ಸರ್ವೆಯ ಮೂಲಕ ವಿಶ್ರುತ ವರದಿಯನ್ನು ತಯಾರಿಸಿ ಬೆಳೆ ನಷ್ಟವಾಗಿರುವ ಪ್ರತಿಯೊಬ್ಬ ರೈತನಿಗೂ ಪರಿಹಾರ ಸಿಗುವಂತೆ ಕ್ರಮ ವಹಿಸಬೇಕು. ಯಾರ್ಯಾರು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸದರಿ ಬೆಳೆ ನಷ್ಟ ಹೊಂದಿರುವ ರೈತರ ಕೃಷಿ ಸಾಲವನ್ನು ರಾಜ್ಯ ಸರ್ಕಾರ ಸಂಪೂರ್ಣ ಮನ್ನಾ ಮಾಡಬೇಕು. ಲೋಕಸಭಾ ಸದಸ್ಯರು ಇದು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿಸಿ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಮೂಲಕ ನಷ್ಟ ಪರಿಹಾರ ಕೊಡಿಸಲು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…