ಚಾಮರಾಜನಗರ

ಹನೂರು| ಕಾಡಾನೆ ದಾಳಿಗೆ ಬೆಳೆ ನಾಶ: ಆತ್ಮಹತ್ಯೆ ಎಚ್ಚರಿಕೆ ನೀಡಿದ ಅನ್ನದಾತ

ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ ನಾಶ ಮಾಡುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರು ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ಮತ್ತೆ ಆನೆ ದಾಳಿ ನಡೆಸಿದರೆ ಕುಟುಂಬಸ್ಥರೆಲ್ಲರೂ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರೈತ ಬಂಗಾರು ಎಚ್ಚರಿಕೆ ನೀಡಿದ್ದಾರೆ.

ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಿ ಜಿ ಪಾಳ್ಯ ವಲಯ ಹಾಗೂ ಬಿ ಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿನ ಕಾಮಶೆಟ್ಟಿ ಎಂಬುವವರ ಜಮೀನಿನಲ್ಲಿ ತೆಂಗು, ಜೋಳ, ತರಕಾರಿ ಬೆಳೆಗಳಾದ ಅವರೆ, ತೊಗರಿ, ಮೆಣಸಿನಕಾಯಿ, ಬೀಟ್‌ರೋಟ್ ಬೆಳೆದಿದ್ದಾರೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಕಾಡಾನೆಗಳ ಹಿಂಡು ದಾಳಿ ನಡೆಸಿ ತರಕಾರಿ ಬೆಳೆ ಹಾಗೂ ಜೋಳದ ಬೆಳೆಯನ್ನು ನಾಶಪಡಿಸಿದೆ. ತೆಂಗಿನ ಮರದಲ್ಲಿ ಬೆಳೆದಿರುವ ಎಳನೀರನ್ನು ಸಂಪೂರ್ಣವಾಗಿ ಕುಡಿದು ನಾಶ ಮಾಡಿದೆ.

ಜಮೀನಿನಲ್ಲಿ ಬೆಳೆಗಳಿಗೆ ನೀರು ಹಾಯಿಸಲು ಸಾಲ ಮಾಡಿ ಕೃಷಿ ಪರಿಕರಗಳನ್ನು ಖರೀದಿಸಿ ಅಳವಡಿಸಲಾಗಿದೆ. ಕಾಡಾನೆ ನಿರಂತರವಾಗಿ ದಾಳಿ ಮಾಡಿ ಕೃಷಿ ಪರಿಕರಗಳನ್ನು ನಾಶ ಮಾಡಿದೆ. ಈಗಾಗಲೇ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದೇನೆ. ಇದೀಗ ಬೆಳೆದಿರುವ ಬೆಳೆಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ಆನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು ಯಾವುದೇ ಪ್ರಯೋಜನವಾಗಿಲ್ಲ. ಕಳೆದ ಮೂರು ದಿನಗಳಿಂದ ಕುಟುಂಬಸ್ಥರೆಲ್ಲರೂ ನಿದ್ದೆ ಮಾಡದೆ ಬೆಳೆ ಕಾಯುತ್ತಿದ್ದೇವೆ. ಆದರೂ ಯಾವುದೇ ಶಬ್ದಗಳಿಗೂ ಜಗ್ಗದೆ ಕಾಡಾನೆಗಳು ಬೆಳೆಗಳನ್ನು ನಾಶ ಮಾಡುತ್ತಿದೆ.

ಈ ನಿಟ್ಟಿನಲ್ಲಿ ಒಂದು ತೀರ್ಮಾನಕ್ಕೆ ಬಂದಿದ್ದು, ಆನೆ ದಾಳಿ ಮುಂದುವರೆದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಮಾಡಿ ಹರಿಬಿಟ್ಟು ಆಕ್ರೋಶ ಹೊರಹಾಕಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

2 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

2 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

2 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

3 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

3 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

3 hours ago