ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ ನಂತರ ದಂಡಿನ ಕೋಲು ಹಿಡಿದು ಹುಲಿವಾಹನ ಉತ್ಸವದಲ್ಲಿ ಭಾಗಿಯಾದರು.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಗೆ ಆಗಮಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಬೆಳಿಗ್ಗೆ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಆಗಮಿಸಿ ದೇವರ ದರ್ಶನ ಪಡೆದ ನಂತರ ಪ್ರಾಧಿಕಾರದ ಕಾರ್ಯದರ್ಶಿ ರಘು ರವರಿಂದ ಬೆಳ್ಳಿ ರಥೋತ್ಸವದ ಬಗ್ಗೆ ಮಾಹಿತಿ ಪಡೆದುಕೊಂಡರು.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಯ ದರ್ಶನಕ್ಕೆ ಆಗಮಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರಿಗೆ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ವಾದ್ಯ ಮೇಳಗಳೊಂದಿಗೆ ಪೂರ್ಣ ಕುಂಭ ಸ್ವಾಗತ ಕೋರಲಾಯಿತು.
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಾಥ್ ನೀಡಿದರು.





