ಚಾಮರಾಜನಗರ

ವಸತಿ ಒದಗಿಸಿಕೊಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಹನೂರು: ಹನೂರು ತಾಲ್ಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಮ್ಮನಗದ್ದೆ ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಆಶ್ರಯ ನಿವೇಶ ಮತ್ತು ವಸತಿ ಒದಗಿಸಿಕೊಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಜೊತೆ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಹನೂರು ಪಟ್ಟಣದ ತಹಶಿಲ್ದಾರ್‌ ಕಚೇರಿ ಮುಂಭಾಗ ಜಮಾಯಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ತಾಲ್ಲೂಕು ಆಡಳಿತ ಹಾಗೂ ಜಿಲ್ಲಾಡಳಿತದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ದಲಿತ ಸಂಘರ್ಷ ಸಮಿತಿ ಮಂಡ್ಯ ಜಿಲ್ಲಾ ಸಂಚಾಲಕ ನಂಜುಂಡ ಮೌರ್ಯ ಅವರು, ದೊಮ್ಮನ ಗದ್ದೆ ಗ್ರಾಮದಲ್ಲಿ ಸುಮಾರು 85 ಕ್ಕೂ ಹೆಚ್ಚು ಪರಿಶಿಷ್ಟ ಜಾತಿಗೆ ಸೇರಿದ ಆದಿ ಜಾಂಬವ ಸಮುದಾಯದ ಕುಟುಂಬಗಳು ನೂರಾರು ವರ್ಷಗಳಿಂದ ವಾಸ ಮಾಡುತ್ತಿದ್ದಾರೆ. ಈ ಕುಟುಂಬಗಳಿಗೆ ಸರ್ಕಾರ ಬಿಪಿಎಸ್‌ ಕಾರ್ಡ್‌ ಸಹ ವಿತರಿಸಿದೆ. ಈ ನಿಟ್ಟಿನಲ್ಲಿ ವಾಸ ಮಾಡಲು ಸರ್ಕಾರ ನಿವೇಶನ ಮತ್ತು ವಸತಿ ಕಲ್ಪಿಸಿ ಕೊಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ಬಳಿಕ ತಹಶೀಲ್ದಾರ್‌ ಗುರುಪ್ರಸಾದ್‌ ಮಾತನಾಡಿ, ನೀವು ಶೆಡ್‌ ಹಾಕಿಕೊಂಡು ಇರುವ ಸರ್ವೆ ನಂಬರ್‌ ಸಿವಿಲ್‌ ನ್ಯಾಯಾಲಯದಲ್ಲಿ ಇದೆ. ಆದ್ದರಿಂದ ನಾನು ಮಧ್ಯ ಪ್ರವೇಶ ಮಾಡಲು ಸಾಧ್ಯವಿಲ್ಲ. ಈ ಪ್ರದೇಶ ವ್ಯಾಪ್ತಿಯಲ್ಲಿರುವ ಸರ್ಕಾರಿ ಜಾಗ ಗುರುತಿಸಿ ಸರ್ವೆ ಮಾಡಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುತ್ತೇನೆ ಎಂದು ಭರವಸೆ ನೀಡಿದರು.

 

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

12 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

12 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

13 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

13 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

14 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

22 hours ago