ಚಾಮರಾಜನಗರ

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ ರಸ್ತೆಯ ಕೌದಳ್ಳಿ ಗ್ರಾಮದ ಬಳಿ ಇರುವ ತಗ್ಗು ಸೇತುವೆ ಮಳೆಯಿಂದ ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ 6, 10, 12 ಮತ್ತು 16 ಚಕ್ರಗಳ ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲು ಲೋಕೋಪಯೋಗಿ ಇಲಾಖೆ ಮುಂದಾಗಿದೆ.

ಈ ಕುರಿತು ಮಹದೇಶ್ವರ ಬೆಟ್ಟ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಹನೂರು ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಿಗೆ ಸೆ.30 ರಂದು ಪತ್ರ ಬರೆದಿದ್ದಾರೆ.

ಪತ್ರದಲ್ಲಿ, ಸೆ.29 ರಂದು ಸುರಿದ ಭಾರಿ ಮಳೆಯಿಂದ ಕೌದಳ್ಳಿ ಹಳ್ಳದ ಸೇತುವೆ ಮೇಲೆ 4 ಅಡಿ ಎತ್ತರಕ್ಕೆ ಪ್ರವಾಹದ ನೀರು ಹರಿದಿದೆ. ಇದರಿಂದ ಸೇತುವೆಯ ಅಡ್ಡಗೋಡೆ, ಪೇವ್‌ಮೆಂಟ್ ಪದರ ಕಿತ್ತು ಹೋಗಿ ಡಾಂಬರು ಕುಸಿದಿದೆ. ಈ ಸ್ಥಿತಿಯಲ್ಲಿ ಭಾರಿ ವಾಹನಗಳು ಸಂಚರಿಸಿದರೆ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಮಳೆಗಾಲ ಇರುವುದರಿಂದ ಸದ್ಯಕ್ಕೆ ಶಾಶ್ವತ ದುರಸ್ತಿ ಅಸಾಧ್ಯ ಎಂದು ತಿಳಿಸಲಾಗಿದೆ.

ಈ ನಿಟ್ಟಿನಲ್ಲಿ ಗ್ರಾಮಸ್ಥರು ಮತ್ತು ದ್ವಿಚಕ್ರ ವಾಹನ, ಕಾರು-ಜೀಪುಗಳಂತಹ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಏಕಮುಖವಾಗಿ ತಾತ್ಕಾಲಿಕ ದುರಸ್ತಿ ಮಾಡಲಾಗಿದೆ. ಪ್ರವಾಹದ ಸಮಯದಲ್ಲಿ ಸಂಚಾರ ಸಂಪೂರ್ಣ ಬಂದ್ ಆಗಿರುತ್ತದೆ.

ಹಳ್ಳದ ಗರಿಷ್ಠ ನೀರಿನ ಹರಿವಿನ ಹೈಡ್ರಾಲಿಕ್ ಅಧ್ಯಯನ ನಡೆಸಿ, ಈ ಸ್ಥಳದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅಲ್ಲಿಯವರೆಗೆ ಭಾರಿ ವಾಹನಗಳು (ಬಸ್ ಸೇರಿದಂತೆ) ಈ ಮಾರ್ಗ ಬಳಸದಂತೆ ನಿರ್ಬಂಧಿಸಲು ಮತ್ತು ಬದಲಿ ಮಾರ್ಗದ ಮೂಲಕ ಸಂಚರಿಸಲು ಆದೇಶ ಹೊರಡಿಸುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿದೆ.

ಬದಲಿ ಮಾರ್ಗವಾಗಿ ಹನೂರು-ರಾಮಾಪುರ-ಕೌದಳ್ಳಿ ಮೂಲಕ ಸಂಚರಿಸಲು ಸೂಚಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

3 mins ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

8 mins ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

13 mins ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

2 hours ago

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

6 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

6 hours ago