Mysore
25
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಇಂದಿನಿಂದ ಅಕ್ಟೋಬರ್.‌9ರವರೆಗೆ ಚಲುವ ಚಾಮರಾಜನಗರ ದಸರಾ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಇಂದಿನಿಂದ ಅಕ್ಟೋಬರ್.‌9ರವರೆಗೆ ಚಲುವ ಚಾಮರಾಜನಗರ ದಸರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದೆ.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಭಾಗವಾಗಿ ನಡೆಯುತ್ತಿರುವ ಚಾಮರಾಜನಗರ ದಸರಾಗೆ ಇಡೀ ನಗರ ಸಿಂಗಾರಗೊಂಡಿದೆ.

ಚಾಮರಾಜೇಶ್ವರ ದೇವಸ್ಥಾನದಿಂದ 1 ಕಿ.ಮೀ ಉದ್ದದವರೆಗಿನ ಬಿ.ರಾಚಯ್ಯ ಜೋಡಿ ರಸ್ತೆಗೆ ಬಣ್ಣ ಬಣ್ಣದ ವಿದ್ಯುತ್‌ ದೀಪಾಲಂಕಾರ ಮಾಡಲಾಗಿದ್ದು, ಮಧುವಣಗಿತ್ತಿಯಂತೆ ಕಂಗೊಳಿಸುತ್ತಿದೆ.

ದಸರಾ ಪ್ರಯುಕ್ತ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದ್ದು, ಫಲಪುಷ್ಪ ಪ್ರದರ್ಶನ, ಕವಿಗೋಷ್ಠಿ, ರೈತ ದಸರಾ, ದಸರಾ ಗ್ರಾಮೀಣ ಕ್ರೀಡಾಕೂಟ, ಪಾರಂಪರಿಕ ನಡಿಗೆ, ಆಹಾರ ಮೇಳವು ದಸರಾದ ಪ್ರಮುಖ ಆಕರ್ಷಣೆಯಾಗಿದೆ.

ಶ್ರೀ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮುಖ್ಯ ವೇದಿಕೆ ನಿರ್ಮಾಣ ಮಾಡಲಾಗಿದೆ. ಇನ್ನು ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನಕ್ಕೆ ಡಾ.ರಾಜ್‌ ಕುಮಾರ್‌ ಜಿಲ್ಲಾ ರಂಗಮಂದಿರ, ಜೆ.ಎಚ್.ಪಟೇಲ್‌ ಸಭಾಂಗಣವನ್ನು ಬಳಕೆ ಮಾಡಿಕೊಳ್ಳಲಾಗಿದ್ದು, ಮೂರು ದಿನಗಳ ಕಾಲ ಹಲವು ಕಾರ್ಯಕ್ರಮಗಳು ನಡೆಯಲಿವೆ.

Tags: