ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಇಂದಿನಿಂದ ಅಕ್ಟೋಬರ್.9ರವರೆಗೆ ಚಲುವ ಚಾಮರಾಜನಗರ ದಸರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಭಾಗವಾಗಿ ನಡೆಯುತ್ತಿರುವ ಚಾಮರಾಜನಗರ ದಸರಾಗೆ ಇಡೀ ನಗರ ಸಿಂಗಾರಗೊಂಡಿದೆ.
ಚಾಮರಾಜೇಶ್ವರ ದೇವಸ್ಥಾನದಿಂದ 1 ಕಿ.ಮೀ ಉದ್ದದವರೆಗಿನ ಬಿ.ರಾಚಯ್ಯ ಜೋಡಿ ರಸ್ತೆಗೆ ಬಣ್ಣ ಬಣ್ಣದ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ಮಧುವಣಗಿತ್ತಿಯಂತೆ ಕಂಗೊಳಿಸುತ್ತಿದೆ.
ದಸರಾ ಪ್ರಯುಕ್ತ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದ್ದು, ಫಲಪುಷ್ಪ ಪ್ರದರ್ಶನ, ಕವಿಗೋಷ್ಠಿ, ರೈತ ದಸರಾ, ದಸರಾ ಗ್ರಾಮೀಣ ಕ್ರೀಡಾಕೂಟ, ಪಾರಂಪರಿಕ ನಡಿಗೆ, ಆಹಾರ ಮೇಳವು ದಸರಾದ ಪ್ರಮುಖ ಆಕರ್ಷಣೆಯಾಗಿದೆ.
ಶ್ರೀ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮುಖ್ಯ ವೇದಿಕೆ ನಿರ್ಮಾಣ ಮಾಡಲಾಗಿದೆ. ಇನ್ನು ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನಕ್ಕೆ ಡಾ.ರಾಜ್ ಕುಮಾರ್ ಜಿಲ್ಲಾ ರಂಗಮಂದಿರ, ಜೆ.ಎಚ್.ಪಟೇಲ್ ಸಭಾಂಗಣವನ್ನು ಬಳಕೆ ಮಾಡಿಕೊಳ್ಳಲಾಗಿದ್ದು, ಮೂರು ದಿನಗಳ ಕಾಲ ಹಲವು ಕಾರ್ಯಕ್ರಮಗಳು ನಡೆಯಲಿವೆ.
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…
ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…
ಹಿರಿಯ ರಂಗಕರ್ಮಿ ಹೆಗ್ಗೂಡು ಪ್ರಸನ್ನ ನೇತೃತ್ವದಲ್ಲಿ ನಡೆದ ಸಭೆ; ಸುರೇಂದ್ರ ಕೌಲಗಿ ಮತ್ತಿತರರು ಭಾಗಿ ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್…
ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…