ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲ್ಲೂಕಿನಲ್ಲಿರುವ ಪವಿತ್ರಾ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್ ಸಭೆ ನಡೆಸಲು ಸರ್ಕಾರ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 15 ಮತ್ತು 16ರಂದು ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಚಾಮರಾಜನಗರ ಪ್ರವಾಸ ಕೈಗೊಳ್ಳಲಿದ್ದು, ಫೆಬ್ರವರಿ.15ರಂದೇ ಸಚಿವ ಸಂಪುಟ ಸಭೆ ನಡೆಸಲು ನಿರ್ಧಾರ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಸ್ಥಳೀಯ ಶಾಸಕ ಮಂಜುನಾಥ್ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಲಾಯಿತು.
ಸಚಿವ ಸಂಪುಟ ಸಭೆಗಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಕಲ ಸಿದ್ಧತೆ ನಡೆಯುತ್ತಿದ್ದು, ಸಭೆಗೆ ಬರುವ ಗಣ್ಯರಿಗೆ ಯಾವುದೇ ತೊಂದರೆ ಆಗದಂತೆ ಸಕಲ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಧಿಕಾರ ಸಿದ್ಧತಾ ಕಾರ್ಯ ಕೈಗೊಂಡಿದೆ.
ಈ ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಉಸ್ತುವಾರಿ ಸಚಿವರ ಜೊತೆಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್, ಪ್ರಾಧಿಕಾರ ಕಾರ್ಯದರ್ಶಿ ರಘು ಸೇರಿದಂತೆ ಹಲವು ಅಧಿಕಾರಿಗಳು ಸಹ ಭಾಗಿಯಾಗಿದ್ದರು. ಸಭೆಗೆ ಯಾವುದೇ ತೊಂದರೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಎಲ್ಲಾ ರೀತಿಯ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸಚಿವ ವೆಂಕಟೇಶ್ ಸೂಚನೆ ನೀಡಿದರು.