ಚಾಮರಾಜನಗರ

ಸಾಲೂರು ಮಠಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ ಮಹೋತ್ಸವದ ಅಂಗವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಧರ್ಮಪತ್ನಿ ಉಷಾ ಶಿವಕುಮಾರ್ ಅವರು ಶ್ರೀ ಸಾಲೂರು ಬೃಹನ್ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು.

ಮೊದಲಿಗೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಶ್ರೀ ಸಾಲೂರು ಬೃಹನ್ಮಠಕ್ಕೆ ಭೇಟಿ ನೀಡಿ ಗದ್ದುಗೆ ದರ್ಶನ ಪಡೆದರು.

ಪೀಠಾಧಿಪತಿ ಡಾ.ಶ್ರೀಶಾಂತ ಮಲ್ಲಿಕಾರ್ಜುನ ಸ್ವಾಮೀಜಿಗಳ ಆಶೀರ್ವಾದ ಪಡೆದು, ಮಹದೇಶ್ವರ ಸ್ವಾಮಿಯ ರಾಗಿ ಬೀಸಿದ ರಾಗಿ ಕಲ್ಲಿಗೆ ವಿಶೇಷ ಪೂಜೆ ಸಲ್ಲಿಸಿದರು.

ಪ್ರಾಧಿಕಾರದಿಂದ ಸನ್ಮಾನ: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ಮಹಾಶಿವರಾತ್ರಿಯಂದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ರವರ ಪತ್ನಿ ಉಷಾ ಶಿವಕುಮಾರ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಂತರ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಪ್ರಾಧಿಕಾರದ ವತಿಯಿಂದ ಗೌರವಿಸಿ ಸನ್ಮಾನಿಸಿದರು.

ಈ ವೇಳೆ ಬಮೂಲ್ ನಿರ್ದೇಶಕ ಹರೀಶ್ ಕುಮಾರ್, ಹಾರೋಹಳ್ಳಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವನಗಿರಿಗೌಡ, ಮುಖಂಡರಾದ ಪ್ರಕಾಶ್, ಮಹದೇವಸ್ವಾಮಿ, ಮಹೇಶ್ ಕೊಳ್ಳೇಗಾಲ ಡಿವೈಎಸ್ಪಿ ಧರ್ಮೇಂದ್ರ, ಪಾರು ಪತ್ತೆದಾರ ಮಹಾಲಿಂಗನ ಕಟ್ಟೆ ಮಹದೇವಸ್ವಾಮಿ, ಕಾರ್ಯದರ್ಶಿಗಳ ಆಪ್ತ ಸಹಾಯಕ ರವೀಂದ್ರ ಸೇರಿದಂತೆ ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಆಪ್ತ ಸಂವಾದ: ಒಂದು ಪುಸ್ತಕ ಕ್ರಾಂತಿ ಕಾರ್ಯಕ್ರಮದ ಮೂರನೇ ಸಂಚಿಕೆ

ಮಂಡ್ಯ: ಕನ್ನಡ ಕರ್ನಾಟಕ ಫೌಂಡೇಶನ್, ಎಂಪ್ಟಿ ಪಾಕೆಟ್ ಡ್ರೀಮ್ಸ್ ಜೊತೆಗೂಡಿ ಆಯೋಜಿಸಿದ್ದ ಆಪ್ತ ಸಂವಾದ: ಒಂದು ಪುಸ್ತಕ ಕ್ರಾಂತಿ ಕಾರ್ಯಕ್ರಮದ…

9 mins ago

ಗಾಯಕಿ ಮಂಗ್ಲಿಯಿಂದ ೧೦ ಕೋಟಿ ವಂಚನೆ, ಕೊಲೆ ಬೆದರಿಕೆ ಆರೋಪ

ಬೆಂಗಳೂರು: ಗಾಯಕಿ ಮಂಗ್ಲಿ ಮತ್ತು ಅವರ ಸಹೋದರನ ವಿರುದ್ಧ ೧೦ ಕೋಟಿ ರೂ. ಮೋಸದ ಆರೋಪದಡಿ ಪಂಜಗುಟ್ಟ ಪೊಲೀಸರು ಪ್ರಕರಣ…

35 mins ago

ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲಿ ಒಂದು ವಾರ ಮಳೆ, ಕರಾವಳಿಯಲ್ಲಿ ಬಿಸಿ ಗಾಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ…

1 hour ago

ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ

ದಾವಣಗೆರೆ: ಉಪಚುನಾವಣೆ ಮುಗಿದ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಉಸ್ತುವಾರಿ…

1 hour ago

ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲ್ಲ: ಕೇಂದ್ರ ಸಚಿವ ವಿ.ಸೋಮಣ್ಣ

ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರಿನ ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿಯನ್ನು ಕೇಂದ್ರ ರೈಲ್ವೆ ಸಚಿವ…

1 hour ago

ವಿದ್ಯಾವಂತರೇ ಹೆಚ್ಚಾಗಿ ಕರ್ಮ‌ ಸಿದ್ಧಾಂತ ಪಾಲಿಸುತ್ತಾರೆ: ಸಿಎಂ ಸಿದ್ದರಾಮಯ್ಯ

ಬೀದರ್: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.…

2 hours ago