ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ ಮಹೋತ್ಸವದ ಅಂಗವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಧರ್ಮಪತ್ನಿ ಉಷಾ ಶಿವಕುಮಾರ್ ಅವರು ಶ್ರೀ ಸಾಲೂರು ಬೃಹನ್ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು.
ಮೊದಲಿಗೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಶ್ರೀ ಸಾಲೂರು ಬೃಹನ್ಮಠಕ್ಕೆ ಭೇಟಿ ನೀಡಿ ಗದ್ದುಗೆ ದರ್ಶನ ಪಡೆದರು.
ಪೀಠಾಧಿಪತಿ ಡಾ.ಶ್ರೀಶಾಂತ ಮಲ್ಲಿಕಾರ್ಜುನ ಸ್ವಾಮೀಜಿಗಳ ಆಶೀರ್ವಾದ ಪಡೆದು, ಮಹದೇಶ್ವರ ಸ್ವಾಮಿಯ ರಾಗಿ ಬೀಸಿದ ರಾಗಿ ಕಲ್ಲಿಗೆ ವಿಶೇಷ ಪೂಜೆ ಸಲ್ಲಿಸಿದರು.
ಪ್ರಾಧಿಕಾರದಿಂದ ಸನ್ಮಾನ: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ಮಹಾಶಿವರಾತ್ರಿಯಂದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ರವರ ಪತ್ನಿ ಉಷಾ ಶಿವಕುಮಾರ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಂತರ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಪ್ರಾಧಿಕಾರದ ವತಿಯಿಂದ ಗೌರವಿಸಿ ಸನ್ಮಾನಿಸಿದರು.
ಈ ವೇಳೆ ಬಮೂಲ್ ನಿರ್ದೇಶಕ ಹರೀಶ್ ಕುಮಾರ್, ಹಾರೋಹಳ್ಳಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವನಗಿರಿಗೌಡ, ಮುಖಂಡರಾದ ಪ್ರಕಾಶ್, ಮಹದೇವಸ್ವಾಮಿ, ಮಹೇಶ್ ಕೊಳ್ಳೇಗಾಲ ಡಿವೈಎಸ್ಪಿ ಧರ್ಮೇಂದ್ರ, ಪಾರು ಪತ್ತೆದಾರ ಮಹಾಲಿಂಗನ ಕಟ್ಟೆ ಮಹದೇವಸ್ವಾಮಿ, ಕಾರ್ಯದರ್ಶಿಗಳ ಆಪ್ತ ಸಹಾಯಕ ರವೀಂದ್ರ ಸೇರಿದಂತೆ ಇನ್ನಿತರರು ಹಾಜರಿದ್ದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…