ಹನೂರು: ಪಟ್ಟಣದ ವಾಸವಿ ಮಹಲ್ ಕಲ್ಯಾಣ ಮಂಟಪದಲ್ಲಿ ಸುತ್ತೂರು ಶ್ರೀ ವೀರ ಸಿಂಹಾಸನ ಮಠ, ಮೈಸೂರು ಜೆಎಸ್‌ಎಸ್ ಮಹಾ ವಿದ್ಯಾಪೀಠ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸೆ.21 ರಿಂದ 10 ದಿನಗಳ ಕಾಲ ಆಯೋಜಿಸಿರುವ ಕುಡಿತ ಬಿಡಿಸುವ ಶಿಬಿರಕ್ಕೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಶಿಬಿರದ ಸಂಚಾಲಕ ಡಾ. ಸೋಮಶೇಖರ್ ತಿಳಿಸಿದರು.
ಪಟ್ಟಣದ ವಾಸವಿ ಮಹಲ್ ಕಲ್ಯಾಣ ಮಂಟಪದಲ್ಲಿ ಕುಡಿತ ಬಿಡಿಸುವ ಶಿಬಿರ ಆಯೋಜನೆ ಸಂಬಂಧ ಮಂಗಳವಾರ ಆಯೋಜಿಸಿದ್ದ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮದ್ಯವ್ಯಸನಿಗಳಲ್ಲಿ ಕುಡಿತ ಬಿಡಿಸಿ ಉತ್ತಮ ಜೀವನವನ್ನು ರೂಪಿಸಿಕೊಳ್ಳುವ ಸಲುವಾಗಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ತಾಲೂಕು ಕೇಂದ್ರಗಳಲ್ಲಿ 10 ದಿನಗಳ ಕಾಲ ಕುಡಿತ ಬಿಡಿಸುವ ಶಿಬಿರವನ್ನು 2024ರಿಂದಲೂ ಆಯೋಜಿಸಲಾಗುತ್ತಿದೆ. ಈವರೆಗೂ ನಡೆದ 18 ಶಿಬಿರಗಳಲ್ಲಿ 1152 ಶಿಬಿರಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ.
ಆದರೆ ಹೊಸದಾಗಿ ರಚನೆಯಾದ ಹನೂರು ತಾಲೂಕಿನಲ್ಲಿ ಇದೀಗ ಶಿಬಿರವನ್ನು ಆಯೋಜಿಸಲಾಗಿದೆ. ಆದ್ದರಿಂದ ಮದ್ಯ ವ್ಯಸನಿಗಳು ಇದರ ಪ್ರಯೋಜನ ಪಡೆದುಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು. ಸಂಘ ಸಂಸ್ಥೆಯ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ರೀತಿಯಲ್ಲಿ ಸಹಕಾರ ನೀಡುವುದರ ಮೂಲಕ ಶಿಬಿರವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಇದೇ ವೇಳೆ ಶಿಬಿರ ಯಶಸ್ವಿ ಸಂಬಂಧ ನೆರೆದಿದ್ದವರಿಂದ ಅಗತ್ಯ ಸಲಹೆ, ಸೂಚನೆಯನ್ನು ಪಡೆಯಲಾಯಿತು.
ಈ ಸಂದರ್ಭದಲ್ಲಿ ಚಾಮುಲ್ ನಿರ್ದೇಶಕ ಉದ್ದನೂರು ಪ್ರಸಾದ್, ಪಪಂ ಸದಸ್ಯರಾದ ಹರೀಶ್, ಸುದೇಶ್, ಸೋಮಶೇಖರ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವೆಂಕಟೇಗೌಡ, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಜಿಲ್ಲಾ ನಿರ್ದೇಶಕ ಕಣ್ಣೂರು ಬಸವರಾಜಪ್ಪ, ತಾಲೂಕು ನಿರ್ದೇಶಕ ವಿನೋದ್, ಹಾಪ್ ಕಾಮ್ಸ್ ನಿರ್ದೇಶಕ ಶಿವಪುರ ಲೋಕೇಶ್, ಮುಖಂಡರಾದ ವೆಂಕಟೇಶ್, ನಂಜುಂಡಸ್ವಾಮಿ, ಶಾಂತಮೂರ್ತಿ, ಮಾದೇಶ್, ರಾಜಶೇಖರ್, ಮಾದಪ್ಪ ಹಾಗೂ ಇನ್ನಿತರರು ಹಾಜರಿದ್ದರು.
– 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 3 ಕೋಟಿ ಡೆಪಾಸಿಟ್ ಪತ್ತೆ ಬೆಳಗಾವಿ : ಇಲ್ಲಿನ ನಗರಾಭಿವೃದ್ಧಿ…
ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…
ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…
ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…
ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…
ಡಾ.ಎಂ.ಡಿ.ಉಮೇಶ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪತ್ನಿ ಕಸ್ತೂರ ಬಾ ಅವರು ಏ. ೧೧, ೧೮೬೯ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಗೋಕುಲ್‌ದಾಸ್ ಕಪಾಡಿಯಾ…