Mysore
13
clear sky

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಕೊಳ್ಳೇಗಾಲ: ನಿಂತಿದ್ದ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ ಪೋಸ್ಟ್‌ ನಿಲ್ದಾಣದ ಪಕ್ಕ ನಿಂತಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪುರುಷನ ಮೃತದೇಹ ಪತ್ತೆಯಾಗಿದೆ.

ಸತ್ತೇಗಾಲ ಹ್ಯಾಂಡ್‌ಪೋಸ್ಟ್‌ ಸಮೀಪ ಶುಕ್ರವಾರ(ಸೆ.20) ಮಧ್ಯಾಹ್ನದಿಂದ ಕಾರು ನಿಂತಿದ್ದು, ಸುಮಾರು 40 ರಿಂದ 45 ವರ್ಷದ ವಯಸ್ಸಿನ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಈ ಮೃತದೇಹ ಕಾರಿನ ಹಿಂದೆ ಸೀಟ್‌ನಲ್ಲಿ ಮಲಗಿದ್ದ ಸ್ಥಿತಿಯಲ್ಲಿತ್ತು ಎನ್ನಲಾಗಿದೆ.

ಎರಡು ದಿನಗಳಿಂದ ಅಲ್ಲೇ ನಿಲ್ಲಿಸಿದ್ದ ಕಾರಿನ ಡೋರ್‌ನಿಂದ ರಕ್ತ ಕೆಳಗಡೆ ಸುರಿದು ವಾಸನೆ ಬರುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆಡ ಮಾಹಿತಿ ನೀಡಿದ್ದಾರೆ. ಈ ವಿಚಾರವಾಗಿ ಗ್ರಾಮಾಂತರ ಪೊಲೀಸ್‌ ಠಾಣಯಲ್ಲಿ ಪ್ರಕರಣ ದಾಖಲಾಗಿದೆ.

ನಂತರ ಸ್ಥಳಕ್ಕೆ ಬಂದ ಕೊಳ್ಳೇಗಾಲ ಪೊಲೀಸ್‌ ಇನ್ಸ್‌ಪೆಕ್ಟರ್‌ ಶಿವಮಾದಯ್ಯ, ಗ್ರಾಮಾಂತರ ಪೊಲೀಸ್‌ ಠಾಣೆಯ ಸಬ್‌ ಸನ್ಸ್‌ಪೆಕ್ಟರ್‌ ಸುಪ್ರೀತ್‌, ಅಪರಾಧ ವಿಭಾಗದ ಎಸ್‌ಐ ಚಲುವರಾಜು ಮತ್ತು ಸಿಬ್ಬಂದಿ ವರ್ಗದವರು ಕೊಳೆತ ಮೃತದೇಹವನ್ನು ಪರಿಶೀಲಿಸಿದ್ದಾರೆ.

Tags:
error: Content is protected !!