ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ನಿಲ್ದಾಣದ ಪಕ್ಕ ನಿಂತಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪುರುಷನ ಮೃತದೇಹ ಪತ್ತೆಯಾಗಿದೆ.
ಸತ್ತೇಗಾಲ ಹ್ಯಾಂಡ್‌ಪೋಸ್ಟ್ ಸಮೀಪ ಶುಕ್ರವಾರ(ಸೆ.20) ಮಧ್ಯಾಹ್ನದಿಂದ ಕಾರು ನಿಂತಿದ್ದು, ಸುಮಾರು 40 ರಿಂದ 45 ವರ್ಷದ ವಯಸ್ಸಿನ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಈ ಮೃತದೇಹ ಕಾರಿನ ಹಿಂದೆ ಸೀಟ್‌ನಲ್ಲಿ ಮಲಗಿದ್ದ ಸ್ಥಿತಿಯಲ್ಲಿತ್ತು ಎನ್ನಲಾಗಿದೆ.
ಎರಡು ದಿನಗಳಿಂದ ಅಲ್ಲೇ ನಿಲ್ಲಿಸಿದ್ದ ಕಾರಿನ ಡೋರ್‌ನಿಂದ ರಕ್ತ ಕೆಳಗಡೆ ಸುರಿದು ವಾಸನೆ ಬರುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆಡ ಮಾಹಿತಿ ನೀಡಿದ್ದಾರೆ. ಈ ವಿಚಾರವಾಗಿ ಗ್ರಾಮಾಂತರ ಪೊಲೀಸ್ ಠಾಣಯಲ್ಲಿ ಪ್ರಕರಣ ದಾಖಲಾಗಿದೆ.
ನಂತರ ಸ್ಥಳಕ್ಕೆ ಬಂದ ಕೊಳ್ಳೇಗಾಲ ಪೊಲೀಸ್ ಇನ್ಸ್‌ಪೆಕ್ಟರ್ ಶಿವಮಾದಯ್ಯ, ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಸನ್ಸ್‌ಪೆಕ್ಟರ್ ಸುಪ್ರೀತ್, ಅಪರಾಧ ವಿಭಾಗದ ಎಸ್‌ಐ ಚಲುವರಾಜು ಮತ್ತು ಸಿಬ್ಬಂದಿ ವರ್ಗದವರು ಕೊಳೆತ ಮೃತದೇಹವನ್ನು ಪರಿಶೀಲಿಸಿದ್ದಾರೆ.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…