ಗುಂಡ್ಲುಪೇಟೆ : ತಾಲ್ಲೂಕಿನ ಕಮರಹಳ್ಳಿ- ತೊಂಡವಾಡಿ ರಸ್ತೆಯ ಬದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ಮೃತದೇಹವನ್ನು ಹಾಲಹಳ್ಳಿ ಗ್ರಾಮದ ಸೋಮಣ್ಣ (೭೫) ಎಂದು ಗುರುತಿಸಲಾಗಿದೆ. ಇವರು ಬೇಗೂರಿನಲ್ಲಿ ವಾಸವಿದ್ದರು.
ಇವರ ಶವ ಕಮರಹಳ್ಳಿ-ತೊಂಡವಾಡಿ ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದು, ಇವರ ಕುತ್ತಿಗೆಯನ್ನು ಟವೆಲ್‌ನಲ್ಲಿ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಮೃತ ಸೋಮಣ್ಣ ಅವರು ಕುತ್ತಿಗೆಯಲ್ಲಿ ಚಿನ್ನದ ಸರ ಸೇರಿದಂತೆ ಒಂದಷ್ಟು ಚಿನ್ನ ಧರಿಸಿದ್ದರು. ಈ ಹಿನ್ನೆಲೆಯಲ್ಲಿ ಚಿನ್ನಾಭರಣ ದೋಚಲು ಕೊಲೆ ಮಾಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ಮತ್ತೆ ಕೆಲವರು ವೈಷಮ್ಯದಿಂದ ಕೊಲೆ ಮಾಡಿರಬಹುದು ಎಂದು ಶಂಕಿಸಿದ್ದಾರೆ.
ಇದನ್ನೂ ಓದಿ:-ದಕ್ಷಿಣ ಭಾಗದ ಸಕ್ಕರೆ ಕಾರ್ಖಾನೆಗಳೂ ಹೆಚ್ಚುವರಿ ಬೆಲೆ ನೀಡಬೇಕು : ರಾಜ್ಯ ರೈತ ಸಂಘ ಆಗ್ರಹ
ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಬೇಗೂರು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…
ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರ ವಿದೇಶ ನೀತಿಯಿಂದಾಗಿ ಅಮೇರಿಕಾದ ವಿದೇಶಾಂಗ ಸಚಿವರು ಸೇರಿದಂತೆ…