ಚಾಮರಾಜನಗರ : ಕೊಳ್ಳೇಗಾಲದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಪೆಂಡಿಕ್ಸ್ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಬಾಲಕ ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು.
ಮೃತ ಬಾಲಕನನ್ನು ಕೊಳ್ಳೇಗಾಲದ ಹಳೇ ಹಂಪಾಪುರ ಗ್ರಾಮದ ನಿವಾಸಿ ರವಿ ಅವರ ಪುತ್ರ ಆರ್.ವಿಜಯ್ (10) ಎಂದು ಗುರುತಿಸಲಾಗಿದೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕನನ್ನು ತಾಯಿ ಗೌರಿ ಹಾಗೂ ಕುಟುಂಬಸ್ಥರು ಶುಕ್ರವಾರ ಆಸ್ಪತ್ರೆಗೆ ಕರೆತಂದಾಗ ಆತನಿಗೆ ಅಪೆಂಡಿಕ್ಸ್ ಸಮಸ್ಯೆ ಇದ್ದು, ಶಸ್ತ್ರಚಿಕಿತ್ಸೆ ಮಾಡಿಸುವಂತೆ ವೈದ್ಯರು ಸಲಹೆ ನೀಡಿದ್ದರು.
ಶನಿವಾರ ಮಧ್ಯಾಹ್ನ ಶಸ್ತ್ರಚಿಕಿತ್ಸೆ ನಡೆದಿದ್ದು, ವಿಶ್ರಾಂತಿಗೆಂದು ಮಲಗಿಸಿದ್ದ ಬಾಲಕನಿಗೆ 2ಗಂಟೆ ಕಳೆದರೂ ಯಾವುದೇ ಚಲನವಿಲ್ಲದ ಹಿನ್ನೆಲೆ ಬಾಲಕನ ಉಸಿರಾಟವನ್ನು ಗಮನಿಸಿದ ವೈದ್ಯರು ಬಾಲಕ ಮೃತ ಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.
ಬಾಲಕನ ಸಾವಿಗೆ ವೈದ್ಯರು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದು, ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಗ್ರಾಮಸ್ಥರು ಆಸ್ಪತ್ರೆಯ ಗಾಜುಗಳನ್ನು ಒಡೆದುಹಾಕಿದ್ದಾರೆ.
ಘಟನೆಗೆ ಸಂಬಂಧಿಸಿ ವೈದ್ಯ, ಆಸ್ಪತ್ರೆಯ ಮುಖ್ಯಸ್ಥ, ಅರಿವಳಿಕೆ ತಜ್ಞವೈದ್ಯ ಸೇರಿದಂತೆ ನರ್ಸ್ ಗಳನ್ನು ಕೂಡಲೇ ಬಂಧಿಸಬೇಕು ಎಂದು ಬಾಲಕನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದು ಡಿವೈಎಸ್ಪಿ ಸೋಮೇಗೌಡ ನೇತೃತ್ವದಲ್ಲಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಆಸ್ಪತ್ರೆಗೆ ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದಾರೆ.
ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಬಿ.ಕೆ.ಮಹೇಶ್ ಕುಮಾರ್ ಅವ ರಿಗೆ ಮೃತ ಬಾಲಕನ ಕುಟುಂಬದವರು ದೂರು ನೀಡಿದ್ದು, ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…
ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…