ಚಾಮರಾಜನಗರ

ಐದು ಹುಲಿಗಳ ಸಾವು ಪ್ರಕರಣ: ಕೊನೆಗೂ ಮೂವರು ಆರೋಪಿಗಳ ಬಂಧನ

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಮಾದ ಅಲಿಯಾಸ್‌ ಮಾದರಾಜು, ನಾಗರಾಜ್‌ ಹಾಗೂ ಕೋನಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳನ್ನು ಬಂಧಿಸಿ ಪೊಲೀಸರು ಹಾಗೂ ಅರಣ್ಯ ಸಿಬ್ಬಂದಿಗಳು ವಿಚಾರಣೆ ನಡೆಸುತ್ತಿದ್ದಾರೆ.

ತನ್ನ ಹಸುವನ್ನು ಹುಲಿ ಕೊಂದಿದ್ದಕ್ಕೆ ನಾನೇ ವಿಷ ಹಾಕಿ ಹುಲಿಯನ್ನು ಕೊಂದಿರುವುದಾಗಿ ಮಾದನ ತಂದೆ ಶಿವಣ್ಣ ಹೇಳಿಕೆ ನೀಡಿದ್ದರು. ಪುತ್ರನನ್ನು ರಕ್ಷಿಸುವ ಸಲುವಾಗಿ ತಾನು ಹುಲಿ ಸಾಯಿಸಿದ್ದಾಗಿ ಹೇಳಿಕೆ ನೀಡಿದ್ದರು. ಆದರೆ ತೀವ್ರ ಅನುಮಾನಗೊಂಡ ಪೊಲೀಸರು ವಿಚಾರಣೆ ನಡೆಸಿದಾಗ ಶಿವಣ್ಣನ ಪುತ್ರ ಮಾದ ಅಲಿಯಾಸ್‌ ಮಾದರಾಜು ಐದು ಹುಲಿಗಳ ಸಾವಿಗೆ ನಾನೇ ಕಾರಣ. ನಾನು ತುಂಬಾ ಪ್ರೀತಿಯಿಂದ ಹಸುವನ್ನು ಸಾಕಿದ್ದೆ. ಆದರೆ ಹುಲಿ ಅದನ್ನು ತಿಂದು ಹಾಕಿತ್ತು. ಸತ್ತ ಹಸುವಿಗೆ ವಿಷ ಹಾಕಿದ್ದೆ. ಅದನ್ನು ತಿಂದು ಹುಲಿಗಳು ಸಾವನ್ನಪ್ಪಿವೆ ಎಂದು ತಪ್ಪೊಪ್ಪಿಕೊಂಡಿದ್ದಾನೆ.

 

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

9 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

10 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

11 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

13 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

17 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

17 hours ago