ಚಾಮರಾಜನಗರ: ಕಿವಿ ಚುಚ್ಚಿಸಲು ಆಸ್ಪತ್ರೆಗೆ ಕರೆತಂದ ಆರು ತಿಂಗಳ ಮಗುವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಹಂಗಳಾ ಗ್ರಾಮದ ಆನಂದ್ ಹಾಗೂ ಮಾನಸ ದಂಪತಿಯ ಪ್ರತೀಕ್ಷ ಎಂಬ ಆರು ತಿಂಗಳ ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಕಿವಿ ಚುಚ್ಚಲು ಕಿವಿ ಬಳಿ ಅನಸ್ತೇಷಿಯಾ ಇಂಜೆಕ್ಷನ್ ನೀಡಿದ್ದರು. ಈ ವೇಳೆ ಓವರ್ ಡೋಸ್‌ನಿಂದ ಸಾವಾಗಿದೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.
ಮಗುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…
ಚಿಕ್ಕಬಳ್ಳಾಪುರ: ನಗರಸಭೆ ಪೌರಾಯುಕ್ತೆಗೆ ನಿಂದನೆ, ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.…
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…