Death of thousands of fish: Poisoning suspected
ಚಾಮರಾಜನಗರ : ತಾಲ್ಲೂಕಿನ ದೊಡ್ಡಮೋಳೆ ಗ್ರಾಮದ ಸಮೀಪವಿರುವ ದೊಡ್ಡಕೆರೆಯಲ್ಲಿ ಸಹಸ್ರಾರು ಮೀನುಗಳು ಮೃತಪಟ್ಟಿದ್ದು, ವಿಷಪ್ರಾಶನ ಅಥವಾ ಹೊಸ ನೀರಿಗೆ ಹೊಂದಿಕೊಳ್ಳದೆ ಮೃತಪಟ್ಟಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ.
ಮೃತಪಟ್ಟಿರುವ ಮೀನುಗಳು ಕೆರೆಯ ದಡದಲ್ಲಿ ತೇಲಾಡುತ್ತಿದ್ದು, ಈ ಕೆರೆಯಲ್ಲಿ ಮೀನು ಸಾಕಾಣಿಕೆ ಗುತ್ತಿಗೆ ಪಡೆದಿದ್ದ ಚಿಕ್ಕಮೋಳೆ ಗ್ರಾಮದ ನಿಸರ್ಗ ಮೀನುಗಾರರ ಸಂಘದ ಸದಸ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸುತ್ತೂರು ಏತ ಯೋಜನೆಯ 2ನೇ ಹಂತಕ್ಕೆ ಸೇರಿದ ಕೆರೆಗಳ ಪೈಕಿ ದೊಡ್ಡ ಕೆರೆಯು ಒಂದಾಗಿದ್ದು, ಇತ್ತೀಚೆಗೆ ಈ ಕೆರೆಗೆ ಕಬಿನಿ ನೀರು ತುಂಬಿಸಲಾಗುತ್ತಿದೆ. ಹೊಸ ನೀರು ಕೆರೆ ಅಂಗಳದಲ್ಲಿ ಸಂಗ್ರಹವಾಗಿದ್ದು ಈ ನೀರಿಗೆ ಹೊಂದಿಕೊಳ್ಳಲಾಗದೆ ಮೃತಪಟ್ಟಿರಬಹುದೇ ಎಂಬ ಸಂಶಯ ವ್ಯಕ್ತವಾಗಿದೆ.
ಆದರೆ, ಕೆರೆಯಲ್ಲಿ ಮೀನು ಸಾಕಣೆ ಮಾಡಿ ಮಾರಾಟ ಮಾಡುತ್ತಿದ್ದ ಮೀನುಗಾರರು ಕಿಡಿಗೇಡಿಗಳು ವಿಷ ಹಾಕಿ ಮೀನುಗಳನ್ನು ಸಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಸೂಕ್ತ ತನಿಖೆಯಿಂದಷ್ಟೇ ಮೀನುಗಳ ಸಾವಿನ ಸತ್ಯಾಂಶ ಬಯಲಾಗಬೇಕಿದೆ.
120ಕ್ಕೂ ಹೆಚ್ಚು ಕುಟುಂಬಗಳು ಈ ಕೆರೆಯ ಮೀನುಗಾರಿಕೆಯನ್ನು ನಂಬಿ ಜೀವನ ನಡೆಸುತ್ತಿದ್ದವು. ಈಗ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.
ಅಧಿಕಾರಿಗಳ ಭೇಟಿ, ಪರಿಶೀಲನೆ: ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಮಂಜೇಶ್ವರ್, ಮೀನುಗಾರಿಕೆ ಸಹಾಯಕರಾದ ಶ್ರೀನಿವಾಸ, ಉಮೇಶ್ ಅವರು ಭೇಟಿ ನೀಡಿ ಪರಿಶೀಲಿಸಿದರು.
ಕೆರೆಯ ದಡದಲ್ಲಿರುವ ಮೃತ ಮೀನುಗಳನ್ನು ತೆರವು ಮಾಡುವಂತೆ ಮೀನುಗಾರರಿಗೆ ಸೂಚಿಸಲಾಗಿದೆ. ವಿಷ ಪ್ರಾಶನವಾಗಿದ್ದರೆ ಎಲ್ಲ ಜಾತಿಯ ಮೀನುಗಳ ಸಾಯಬೇಕಿತ್ತು. ಜಿಲೇಜಿ ಜಾತಿಯ ಮೀನುಗಳು ಮಾತ್ರ ಸತ್ತಿವೆ. ಕಾಟ್ಲಾ, ಸಾಮಾನ್ಯ ಜಂಡೆ, ರೋವೋ, ಮಿರ್ಗಾಲ್ ಜಾತಿಯ ಮೀನುಗಳು ಮೃತಪಟ್ಟಿಲ್ಲ ಎಂದು ಉಪ ನಿರ್ದೇಶಕರು ತಿಳಿಸಿದ್ದಾರೆ.
ಹೊಸ ನೀರು ಬಂದಿದ್ದರಿಂದ ಹೊಂದಿಕೊಳ್ಳಲಾರದೆ ಸಾವನ್ನಪ್ಪಿರಬಹುದು. ನೀರಿನ ಮಾದರಿಯನ್ನು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕಳುಹಿಸಲಾಗುವುದು. ಮಂಡಳಿ ಅಧಿಕಾರಿಗಳು ಪರಿಶೀಲಿಸಿ ವರದಿ ನೀಡಿದ ನಂತರ ಸತ್ಯಾಂಶ ತಿಳಿದುಬರಲಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.…
ಬೆಂಗಳೂರು : 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…
ಕೈಗಾರಿಕೆಗಳ ತ್ಯಾಜ್ಯ, ಒಳಚರಂಡಿ ನೀರು ಸೇರಿ ಸ್ನಾನಘಟ್ಟದ ನೀರು ಕಲ್ಮಶ, ಸ್ನಾನ ಮಾಡುವ ಭಕ್ತರಿಗೆ ರೋಗದ ಭೀತಿ ಎಸ್.ಎಸ್.ಭಟ್ ನಂಜನಗೂಡು…
ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ…
ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ…