ಹನೂರು: ದೀಪಾವಳಿ ಜಾತ್ರೆಯ ಅಂಗವಾಗಿ ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾರೀ ಜನಸಾಗರ ಏರ್ಪಟ್ಟಿದೆ.
ಇಂದಿನಿಂದ ನವೆಂಬರ್.2ರವರೆಗೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಸಂಭ್ರಮ ಮನೆಮಾಡಿದ್ದು, ಬೆಟ್ಟಕ್ಕೆ ಲಕ್ಷಾಂತರ ಜನರು ಭೇಟಿ ನೀಡುತ್ತಿದ್ದಾರೆ.
ಮಹದೇಶ್ವರ ಬೆಟ್ಟದಲ್ಲಿ ನಡೆಯುವ ದೀಪಾವಳಿ ಜಾತ್ರಾ ಮಹೋತ್ಸವ ವಿಶೇಷ ಮಹತ್ವ ಪಡೆದುಕೊಂಡಿದ್ದು, ಲಕ್ಷಾಂತರ ಜನರು ಮಾದಪ್ಪನ ದರ್ಶನ ಪಡೆಯಲಿದ್ದಾರೆ.
ಇನ್ನು ಸಾವಿರಾರು ಜನರು ಬೆಟ್ಟಕ್ಕೆ ಕಾಲ್ನಡಿಗೆಯಲ್ಲೇ ಬರಲಿದ್ದು, ಇನ್ನೂ ಹಲವು ಜನರು ಸಾರಿಗೆಗಳ ಮೂಲಕ ಬರುತ್ತಾರೆ.
ಈ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಬರುವ ಜನರಿಗೆ ಎಲ್ಲಾ ಮೂಲಭೂತ ಸೌಕರ್ಯ ಒದಗಿಸಲಾಗಿದ್ದು, ಯಾರಿಗೂ ತೊಂದರೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ಇನ್ನು ದೇವಾಲಯದ ಸುತ್ತಮುತ್ತ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಾವಿರಾರು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.





