ಗುಂಡ್ಲುಪೇಟೆ: ಜಿಂಕೆಯೊಂದು ನೀರು ಕುಡಿಯಲು ಕೆರೆಗೆ ಬಂದು ಹುಲಿ ಬಾಯಿಗೆ ತುತ್ತಾದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನಡೆದಿದೆ.
ಜಿಂಕೆ ಬೇಟೆಯ ದೃಶ್ಯ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದ್ದು, ದೃಶ್ಯವನ್ನು ಕಂಡು ಪ್ರವಾಸಿಗರು ಮಮ್ಮಲ ಮರುಗಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ದೇಶದ ಪ್ರಸಿದ್ಧ ಹುಲಿ ಸಂರಕ್ಷಿತ ಅರಣ್ಯ ಪ್ರದೇಶವಾದ ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ ಜಾಸ್ತಿಯಾಗಿದ್ದು, ಸಫಾರಿಗೆ ತೆರಳುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಂಡೀಪುರ ಆದಾಯ ಮತ್ತಷ್ಟು ಹೆಚ್ಚಾಗಲಿದೆ ಎಂದು ಹೇಳಲಾಗುತ್ತಿದೆ.





