Tiger skin
ಹನೂರು: ತೋಟದಲ್ಲಿ ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಮಾರ್ಪಡಿಸಿ ಚರ್ಮವನ್ನು ಅಲ್ಲಿಯೇ ಬೀಸಾಡಿ ಹೋಗಿದ್ದ ವ್ಯಕ್ತಿಯೋರ್ವನ ಮೇಲೆ ಕಾವೇರಿ ವನ್ಯಜೀವಿ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
ಹನೂರು ತಾಲ್ಲೂನ ಅಜ್ಜೀಪುರ ಗ್ರಾಮದ ನಾಗರಾಜು (೪೦) ಎಂಬಾತನ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಘಟನೆ ವಿವರ
ಕಾವೇರಿ ವನ್ಯಜೀವಿಧಾಮದ ಕಂಪಾರ್ಟ್ಮೆಂಟ್ ೪೦ರ ಹನೂರು ವನ್ಯಜೀವಿ ವಲಯ ಶಾಗ್ಯ ಶಾಖೆಯ ಎಲ್ಲೇಮಾಳ ಗಸ್ತಿನ ವ್ಯಾಪ್ತಿಯ ಅಜ್ಜೀಪುರ ಗ್ರಾಮದ ಸರ್ವೆ ನಂ.೪೪೨/೨ರ ಜಮೀನಿನಲ್ಲಿ ಒಂದು ಜಿಂಕೆಯನ್ನು ಬೇಟೆಯಾಡಿ, ಅದರ ದೇಹವನ್ನು ತುಂಡರಿಸಿ ಮಾಂಸವನ್ನಾಗಿ ಮಾರ್ಪಡಿಸಿ ಜಿಂಕೆಯ ಚರ್ಮವನ್ನು ಅಲ್ಲಿಯೇ ಬೀಸಾಡಿ ಹೋಗಿದ್ದ, ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ವ್ಯಕ್ತಿಯನ್ನು ಗುರುತಿಸಿ ಕಾವೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುರೇಂದ್ರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮರಿಸ್ವಾಮಿ ರವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ನಿರಂಜನ್‌ರವರ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ಗೋಪಾ ಪ್ರಕರಣ ದಾಖಲು ಮಾಡಿದ್ದಾರೆ.
ಜಿಂಕೆ ಬೇಟೆಯಾಡಿ ಹತ್ಯೆ ಮಾಡಿರುವ ಆರೋಪಿ ನಾಗರಾಜು ಪತ್ತೆಗಾಗಿ ಈಗಾಗಲೇ ವಿಶೇಷ ತಂಡ ರಚನೆ ಮಾಡಲಾಗಿದೆ.
ಕಾರ್ಯಾಚರಣೆಯಲ್ಲಿ ಗಸ್ತು ವನಪಾಲಕ ಅನಿಲ್ ಕುಮಾರ್, ಶಿವರಾಜ್ ಪಾಲ್ಗೊಂಡಿದ್ದರು.
ಬೆಂಗಳೂರು: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…
ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್ ವಿಮಾನ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…
ಟೆಹರಾನ್: ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ: ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…