ಚಾಮರಾಜನಗರ

ಜಿಂಕೆ ಬೇಟೆ : ದೂರು ದಾಖಲು

ಹನೂರು: ತೋಟದಲ್ಲಿ ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಮಾರ್ಪಡಿಸಿ ಚರ್ಮವನ್ನು ಅಲ್ಲಿಯೇ ಬೀಸಾಡಿ ಹೋಗಿದ್ದ ವ್ಯಕ್ತಿಯೋರ್ವನ ಮೇಲೆ ಕಾವೇರಿ ವನ್ಯಜೀವಿ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

ಹನೂರು ತಾಲ್ಲೂನ ಅಜ್ಜೀಪುರ ಗ್ರಾಮದ ನಾಗರಾಜು (೪೦) ಎಂಬಾತನ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಘಟನೆ ವಿವರ

ಕಾವೇರಿ ವನ್ಯಜೀವಿಧಾಮದ ಕಂಪಾರ್ಟ್ಮೆಂಟ್ ೪೦ರ ಹನೂರು ವನ್ಯಜೀವಿ ವಲಯ ಶಾಗ್ಯ ಶಾಖೆಯ ಎಲ್ಲೇಮಾಳ ಗಸ್ತಿನ ವ್ಯಾಪ್ತಿಯ ಅಜ್ಜೀಪುರ ಗ್ರಾಮದ ಸರ್ವೆ ನಂ.೪೪೨/೨ರ ಜಮೀನಿನಲ್ಲಿ ಒಂದು ಜಿಂಕೆಯನ್ನು ಬೇಟೆಯಾಡಿ, ಅದರ ದೇಹವನ್ನು ತುಂಡರಿಸಿ ಮಾಂಸವನ್ನಾಗಿ ಮಾರ್ಪಡಿಸಿ ಜಿಂಕೆಯ ಚರ್ಮವನ್ನು ಅಲ್ಲಿಯೇ ಬೀಸಾಡಿ ಹೋಗಿದ್ದ, ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ವ್ಯಕ್ತಿಯನ್ನು ಗುರುತಿಸಿ ಕಾವೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುರೇಂದ್ರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮರಿಸ್ವಾಮಿ ರವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ನಿರಂಜನ್‌ರವರ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ಗೋಪಾ ಪ್ರಕರಣ ದಾಖಲು ಮಾಡಿದ್ದಾರೆ.

ಜಿಂಕೆ ಬೇಟೆಯಾಡಿ ಹತ್ಯೆ ಮಾಡಿರುವ ಆರೋಪಿ ನಾಗರಾಜು ಪತ್ತೆಗಾಗಿ ಈಗಾಗಲೇ ವಿಶೇಷ ತಂಡ ರಚನೆ ಮಾಡಲಾಗಿದೆ.
ಕಾರ್ಯಾಚರಣೆಯಲ್ಲಿ ಗಸ್ತು ವನಪಾಲಕ ಅನಿಲ್ ಕುಮಾರ್, ಶಿವರಾಜ್ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

12 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

16 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago