ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹನೂರು ಪಟ್ಟಣದಲ್ಲಿ ತಹಸೀಲ್ದಾರ್ ಚೈತ್ರರವರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಸಂಘದ ಅಧ್ಯಕ್ಷೆ ಸುಜಾತ ಮಾತನಾಡಿ, ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ ರೂ.10 ಸಾವಿರ ಗ್ಯಾರಂಟಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದ್ದರೂ ಇದುವರೆಗೆ ಅಧಿಕೃತ ಆದೇಶ ಹೊರಬಂದಿಲ್ಲ.
2025ರ ಮಾರ್ಚ್ ಬಜೆಟ್‌ನಲ್ಲಿ ರಾಜ್ಯದ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರೊಂದಿಗೆ ಆಶಾ ಕಾರ್ಯಕರ್ತೆಯರಿಗೂ ರೂ.1,000 ಹೆಚ್ಚಳ ಮಾಡುವುದಾಗಿ ತಿಳಿಸಲಾಗಿತ್ತು. ಆ ಭರವಸೆಯ ಹಿನ್ನೆಲೆಯಲ್ಲಿ ಹೋರಾಟ ಕೈಬಿಡಲಾಗಿತ್ತು. ಆದರೆ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ಹೆಚ್ಚಳ ಜಾರಿಯಾದರೂ ಆಶಾ ಕಾರ್ಯಕರ್ತೆಯರಿಗೆ ಮಾತ್ರ ಯಾವುದೇ ಹೆಚ್ಚಳ ಮಾಡಿಲ್ಲ ಎಂದು ತಿಳಿಸಿದರು.
ಅದೇ ರೀತಿ, ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಸ್ತುತ ಇರುವ ರೂ.5 ಸಾವಿರ ಗೌರವಧನವನ್ನು ರೂ.8,000ಕ್ಕೆ ಹೆಚ್ಚಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ 14 ತಿಂಗಳು ಕಳೆದರೂ ಆ ಕುರಿತು ಯಾವುದೇ ಆದೇಶ ಜಾರಿಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಆರೋಗ್ಯ ಸಚಿವರು ಹಾಗೂ ರಾಜ್ಯ ಮಟ್ಟದ ಅಧಿಕಾರಿಗಳು ಹಲವಾರು ಸಭೆಗಳು ನಡೆಸಿದರೂ ಸ್ಪಷ್ಟ ಫಲಿತಾಂಶ ಕಂಡುಬಂದಿಲ್ಲ. ಬದಲಾಗಿ ಇಲಾಖೆಯಿಂದ ಆಶಾ ಕಾರ್ಯಕರ್ತೆಯರ ವಿರುದ್ಧ ಏಕಪಕ್ಷೀಯ ಆದೇಶಗಳನ್ನು ಹೊರಡಿಸಲಾಗುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ತರ್ಕಬದ್ಧಗೊಳಿಸುವಿಕೆ ಎಂಬ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರ ಸೇವೆಯನ್ನು ಕಡಿತಗೊಳಿಸುವ ಆದೇಶ ಹೊರಡಿಸಿರುವುದು ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೂ ವಿರುದ್ಧವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಕೈಬಿಡಲಾಗುವ ಆಶಾಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ‘ಗ್ರೂಪ್-ಡಿ’ ನೌಕರಿ ನೀಡುವುದಾಗಿ ಹೇಳುತ್ತಿರುವುದು, ಹೆಚ್ಚಿನ ಆಶಾ ಕಾರ್ಯಕರ್ತೆಯರನ್ನು ಕೈಬಿಡುವ ಹುನ್ನಾರವೆಂದು ಆರೋಪಿಸಿದರು.
ಈ ವೇಳೆ ಅಧ್ಯಕ್ಷರಾದ ಸುಜಾತ, ಕಾರ್ಯದರ್ಶಿ ಶಶಿಕಲಾ, ಪ್ರಿಯಾಂಕ, ಸರೋಜ, ಸುನೀತ, ಗೌರಮ್ಮ ಹಾಗೂ ಇನ್ನಿತರರು ಇದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…