Mysore
23
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಸಮರ್ಪಕ ನೀರು ಪೂರೈಕೆಗೆ ಒತ್ತಾಯ ; ತಾಂಡ ನಿವಾಸಿಗಳ ಪ್ರತಿಭಟನೆ

ಹನೂರು : ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಂಡ ಮೇಡು ನಿವಾಸಿಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಮಾರ್ಟಿಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಂಡಾಮೇಡು ಗ್ರಾಮದಲ್ಲಿ ೬೫ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ನಾಲ್ಕು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆಯಿಂದ ಪರಿತಪಿಸುವಂತಾಗಿದೆ. ನೀರು ಪೂರೈಕೆ ಮಾಡುವಂತೆ ಒತ್ತಾಯಿಸಿ ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಪ್ರತಿನಿತ್ಯ ತಮ್ಮ ಕೆಲಸ ಕಾರ್ಯಗಳಿಗೆ ತೆರಳಲು ಸಾಧ್ಯವಾಗದೆ ಕುಡಿಯುವ ನೀರು, ಸಂಗ್ರಹ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆಯನ್ನು ಖಂಡಿಸಿ ರಸ್ತೆ ನಡೆಸುತ್ತಿರುವುದಾಗಿ ಪ್ರತಿಭಟನಾಕಾರರು ಆರೋಪಿಸಿದರು.

ಗ್ರಾಮ ಘಟಕದ ಅಧ್ಯಕ್ಷ ಅರ್ಪುದರಾಜ್ ಮಾತನಾಡಿ, ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲ್ ರೋಡ್ ಗ್ರಾಮದಿಂದ ಒಡಕೆಹಳ್ಳ ಗ್ರಾಮದವರೆಗೂ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಈ ಭಾಗದಲ್ಲಿ ಅಂತರ್ಜಲ ಮಟ್ಟ ಕಡಿಮೆಯಾಗಿರುವುದರಿಂದ ಒಂದು ಸಾವಿರಕ್ಕೂ ಹೆಚ್ಚು ಅಡಿ ಕೊಳವೆಬಾವಿ ಕೊರೆಸಿದರೂ ನೀರು ಸಿಗುತ್ತಿಲ್ಲ. ಏತ ನೀರಾವರಿಯ ಮೂಲಕ ನಮ್ಮ ಗ್ರಾಮಗಳ ಕೆರೆ-ಕಟ್ಟೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡಿದರೆ ಶಾಶ್ವತ ಪರಿಹಾರ ಸಿಗಲಿದೆ. ಇನ್ನು ಮುಂದಾದರೂ ಸರ್ಕಾರ ಶಾಶ್ವತ ಪರಿಹಾರ ಕೊಡಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ:-ನೀರಿನ ಘಟಕಕ್ಕೆ ಗುದ್ದಿದ ಬೊಲೆರೋ ವಾಹನ : ತಪ್ಪಿದ ಅನಾಹುತ ; ಘಟಕ ಜಖಂ

ಪ್ರತಿಭಟನೆ ಸ್ಥಳಕ್ಕೆ ಪಿಡಿಒ ಚೆನ್ನೇಶ್ ಭೇಟಿ ನೀಡಿ ಪ್ರತಿಭಟನಾಕಾರರ ಸಮಸ್ಯೆಯನ್ನು ಆಲಿಸಿ, ಅಂತರ್ಜಲ ಮಟ್ಟ ಕಡಿಮೆಯಾಗಿರುವುದರಿಂದ ಕೊಳವೆ ಬಾವಿಗಳಲ್ಲಿ ನೀರು ಬಾರದಿರುವುದರಿಂದ ಕುಡಿಯುವ ನೀರನ್ನು ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಸಮಸ್ಯೆ ಇರುವ ಕಡೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಇಂದಿನಿಂದ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುವುದು ಎಂದು ಭರವಸೆ ನೀಡಿದ ಮೇರೆಗೆ ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ.

Tags:
error: Content is protected !!