ಚಾಮರಾಜನಗರ: ರಾಜ್ಯದಲ್ಲಿ ಆನ್‌ಲೈನ್ ಜೂಜಾಟವನ್ನು ಸಂಪೂರ್ಣ ನಿಷೇಧಿಸಿ ಆದೇಶ ಜಾರಿಗೊಳಿಸಬೇಕು ಎಂದು ರಾಜ್ಯ ರೈತ ಸಂಘ, ಹಸಿರುಸೇನೆಯ ಹೆಗ್ಗವಾಡಿಪುರ ಮಹೇಶ್ ಕುಮಾರ್ ಒತ್ತಾಯಿಸಿದರು.
ಆನ್‌ಲೈನ್ ರಮ್ಮಿಯಂಥ ಜೂಜಾಟ ನಿಷೇಧ ಕುರಿತು ಆಯಾ ರಾಜ್ಯ ಸರ್ಕಾರಗಳೇ ತೀರ್ಮಾನ ತೆಗೆದುಕೊಳ್ಳುವ ಕುರಿತು ಕೇಂದ್ರ ಸರ್ಕಾರ ಸಂಸತ್‌ನಲ್ಲಿ ತಿಳಿಸಿದೆ. ಹಾಗಾಗಿ ಆನ್‌ಲೈನ್ ಜೂಜಾಟ ಆಪ್ ಸಂಬಂಧ ಸೆಕ್ಷನ್ ೧೧೨ರ ಅಡಿಯಲ್ಲಿ ಪ್ರಕರಣ ದಾಖಲಿಸುವ ಮೂಲಕ ಸಂಬಂಧಿಸಿದವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಆನ್‌ಲೈನ್ ಜೂಜಾಟ ಆಡಲು ಪ್ರಚೋದನೆ ನೀಡುವವರ ವಿರುದ್ಧವೂ ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ನಿರ್ದೇಶನ ಹೊರಡಿಸಬೇಕು. ಆನ್‌ಲೈನ್ ಜೂಜಾಟ ನಿಷೇಧ ಆದೇಶ ಹೊರಡಿಸದಿದ್ದರೆ ಮಾ.೨೮ ರಂದು ಚಾ.ನಗರದ ಜಿಲ್ಲಾಡಳಿತ ಭವನ, ಎಸ್ಪಿ ಕಚೇರಿ, ಪೊಲೀಸ್ ಠಾಣೆಗಳ ಮುಂದೆ ಇಸ್ಪೀಟ್ ಆಡಿಸುವುದಾಗಿ ಎಚ್ಚರಿಕೆ ನೀಡಿ ಗಡವು ನೀಡಿದ್ದೆವು ಎಂದರು.
ಆದರೆ, ಕೇಂದ್ರ ಸರ್ಕಾರ ಆಯಾ ರಾಜ್ಯಗಳಿಗೆ ನಿಷೇಧದ ವಿವೇಚನೆಯ ನಿರ್ಧಾರಕ್ಕೆ ಸೂಚನೆ ನೀಡಿರುವುದರಿಂದ ಆದೇಶ ನೀಡಿರುವುದರಿಂದ ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ಮುಂದೂಡಲಾಗಿದೆ. ಒಂದು ವೇಳೆ ರಾಜ್ಯ ಸರ್ಕಾರ ಆನ್‌ಲೈನ್ ಜೂಜಾಟದ ವಿರುದ್ಧ ಕ್ರಮ ವಹಿಸದಿದ್ದರೆ, ಏ.೬ ರಂದು ರೈತ ಸಂಘ ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಗೋಷ್ಠಿಯಲ್ಲಿ ರೈತ ಮುಖಂಡರಾದ ಮಹೇಶ್, ಮಹಾದೇವಸ್ವಾಮಿ ಹಾಜರಿದ್ದರು.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…