ಚಾಮರಾಜನಗರ

6 ತಿಂಗಳಲ್ಲಿ ಜನನ-ಮರಣ ದಾಖಲೆ ಡಿಜಿಟಲೀಕರಿಸಿ : ಜಿಲ್ಲಾಧಿಕಾರಿ ಶಿಲ್ಪನಾಗ್‌

ಚಾಮರಾಜನಗರ: ಜಿಲ್ಲೆಯಲ್ಲಿ ಜನನ-ಮರಣ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಇನ್ನು 6 ತಿಂಗಳ ಒಳಗಡೆ ಇದರ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಜನನ- ಮರಣಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಶಾಲಾ, ಕಾಲೇಜು ಪ್ರವೇಶಕ್ಕಾಗಿ ಹಾಗೂ ಸಾರ್ವಜನಿಕರಿಗೆ ಸರ್ಕಾರದ ಯಾವುದೇ ಸೌಲಭ್ಯಗಳನ್ನು ಪಡೆಯಲಿಕ್ಕಾಗಿ ಜನನ ಪ್ರಮಾಣ ಪ್ರಮಾಣಪತ್ರಗಳು ಅತ್ಯಾವಶ್ಯಕವಾಗಿವೆ ಎಂದರು.

ಸಾಕಷ್ಟು ವರ್ಷಗಳಿಂದ ಲಭ್ಯವಿರುವ ಜನನ-ಮರಣ ಪತ್ರಗಳನ್ನು ಸೂಕ್ತವಾಗಿ ನಿರ್ವಹಿಸಬೇಕು. ಈ ದಾಖಲೆಗಳನ್ನು ಯಾವುದೇ ರೀತಿಯಲ್ಲಿಯೂ ತಡೆ ಮಾಡದೇ ಡಿಜಿಟಲೀಕರಣ ಮಾಡಬೇಕು ಎಂದು ಕಟ್ಟುನಿಟ್ಟಾಗಿ ತಿಳಿಸಿದರು.

ಸಾಮಾನ್ಯವಾಗಿ ಜನನ ಪ್ರಮಾಣಪತ್ರಗಳನ್ನು 21 ದಿನದೊಳಗೆ ನೀಡಬೇಕು. ಜನನ- ಮರಣ ಪ್ರಮಾಣ ಪತ್ರಗಳನ್ನು ಡಿಜಿಟಲೀಕರಣ ಮಾಡುವುದರಿಂದ ಜನರು ಕಚೇರಿಗೆ ಅಲೆದಾಡುವುದು ತಪ್ಪಲಿದೆ. ನಮ್ಮ ಜಿಲ್ಲೆಗೆ ಸಂಬಂಧಿಸಿದ ಜನನ -ಮರಣ ಪತ್ರಗಳು ಬೇರೆ ಜಿಲ್ಲೆಗಳಲ್ಲಿದ್ದರೂ ಅದನ್ನು ತರಿಸಿಕೊಳ್ಳುವ ಕೆಲಸವಾಗಬೇಕು ಎಂದು ಹೇಳಿದರು.

ಸಂಬಂಧಿಸಿದ ತಾಲ್ಲೂಕು ಕಚೇರಿಗಳಲ್ಲಿ ಆಯಾ ತಾಲ್ಲೂಕುವಾರು ಹಾಗೂ ವರ್ಷಾವಾರು ದಾಖಲೆಗಳನ್ನು ಸಂಗ್ರಹಿಸಿಡುವ ಕಾರ್ಯ ಆದ್ಯತೆ ಮೇರೆಗೆ ಆಗಬೇಕು. ಪರಿಶಿಷ್ಟ ಪಂಗಡಗಳ ಆದಿವಾಸಿ ಜನರು ವಾಸಿಸುವ ಹಾಡಿ-ಪೋಡುಗಳಲ್ಲಿನ ಮಕ್ಕಳಿಗೆ ಜನನ ಪ್ರಮಾಣಪತ್ರಗಳನ್ನು ನಿಗದಿತ ಕಾಲಮಿತಿಯಲ್ಲಿ ನೀಡಬೇಕು ಎಂದು ತಾಕೀತು ಮಾಡಿದರು.

ಮರಣ ಪ್ರಮಾಣಪತ್ರದಲ್ಲಿ ಎಲ್ಲಾ ವಿಷಯಗಳನ್ನು ಕ್ರಮಬದ್ಧವಾಗಿ ದಾಖಲಿಸುವಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ನಿಗಾ ವಹಿಸಬೇಕು.ಈ ಪ್ರಮಾಣಪತ್ರಗಳ ವಿತರಣೆಯಲ್ಲಿ ವಿಳಂಬಕ್ಕೆ ಅವಕಾಶವಾಗದಂತೆ ಗ್ರಾಮ ಪಂಚಾಯಿತಿಗಳು, ಸ್ಥಳೀಯ ಸರ್ಕಾರಿ ಆಸ್ಪತ್ರೆಗಳು ಎಚ್ಚರ ವಹಿಸಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಽಕಾರಿಗಳಿಗೆ ಸೂಕ್ತ ತರಬೇತಿ ಸಹ ನೀಡಬೇಕು ಎಂದರು.

ಜನನ ಮರಣ ಪ್ರಮಾಣಪತ್ರ ನೀಡಿಕೆಯಲ್ಲಿ ಆರೋಗ್ಯ ಇಲಾಖೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳು ಸಾಂಖ್ಯಿಕ ಇಲಾಖೆಯೊಂದಿಗೆ ಸಮನ್ವಯ ಸಾಧಿಸಬೇಕು. ದಾಖಲೆಗಳ ನಿರ್ವಹಣೆ ಸಂಬಂಧ ತಾಲೂಕು ಮಟ್ಟದ ಸಭೆಗಳನ್ನು ನಿಯಮಿತವಾಗಿ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಡಿಸಿ ತಿಳಿಸಿದರು.

ಜಿಪಂ ಸಿಇಒ ಮೋನಾ ರೋತ್, ಎಎಸ್‌ಪಿ ಎಂ.ಎನ್. ಶಶಿಧರ್, ಜಿಲ್ಲಾ ಸಾಂಖ್ಯಿಕ ಸಂಗ್ರಹಣಾಧಿಕಾರಿ ಪವನ್‌ಕುಮಾರ್, ಜಿಲ್ಲಾಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ. ಮಹೇಶ್, ಜಿಲ್ಲಾ ಸರ್ಜನ್ ಡಾ.ಮಹೇಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಎಂ.ವಿ. ಸುಧಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಬೀದ್, ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕಿ ಸುಷ್ಮಾ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭ : ಸಿಎಂ

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…

8 hours ago

ಜ.5, 6ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ; ತವರಲ್ಲಿ ಸಂಭ್ರಮ ಸಾಧ್ಯತೆ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…

9 hours ago

ಜ.4ರಂದು ʼಚಾ.ಬೆಟ್ಟಕ್ಕೆ ನಡಿಗೆʼ ಜಾಗೃತಿ ಜಾಥ ; ಬೆಂಬಲಿಸಲು ಮನವಿ

ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…

9 hours ago

ದೇಶದ ಸ್ವಚ್ಛ ನಗರ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ 11 ಮಂದಿ ಸಾವು!

ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…

10 hours ago

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…

11 hours ago

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

12 hours ago