ಚಾಮರಾಜನಗರ

ಸಾರ್ವಜನಿಕರಿಂದ ದೂರು ಬಂದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ: ಡಿಸಿ ಶಿಲ್ಪನಾಗ್

ಹನೂರು: ಚಾಮರಾಜನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪೈಕಿ ಹನೂರು ಪಟ್ಟಣ ಪಂಚಾಯಿತಿ ಕಚೇರಿಯಿಂದ ಹೆಚ್ಚು ದೂರುಗಳು ಬರುತ್ತಿರುವುದರಿಂದ ಸಿಬ್ಬಂದಿಗಳಿಗೆ ಸೂಕ್ತ ಎಚ್ಚರಿಕೆ ನೀಡಿದ್ದು ಮುಂದಿನ ದಿನಗಳಲ್ಲಿ ದೂರು ಬಾರದಂತೆ ಕ್ರಮವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಟಿ ಶಿಲ್ಪಾನಾಗ್ ತಿಳಿಸಿದರು.

ಹನೂರು ಪಟ್ಟಣ ಪಂಚಾಯತಿ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಜಿಲ್ಲೆಯ ಹನೂರು ಪಟ್ಟಣ ಪಂಚಾಯಿತಿಯಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳು ಸಮರ್ಪಕವಾಗಿ ಆಗದೆ ಮಧ್ಯವರ್ತಿಗಳ ಕೆಲಸ ಮಾತ್ರ ತ್ವರಿತಗತಿಯಲ್ಲಿ ಆಗುತ್ತಿರುವ ಬಗ್ಗೆ ಹಲವಾರು ದೂರುಗಳು ಬರುತ್ತಿದೆ. ಈ ಸಂಬಂಧ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗೆ ಸೂಕ್ತ ನಿರ್ದೇಶನ ನೀಡಲಾಗಿದ್ದು ಪಟ್ಟಣದ 13 ವಾರ್ಡಗಳ ಕೆಲಸ ಕಾರ್ಯಗಳು ಸುಗಮವಾಗಿ ಆಗಬೇಕು, ಇನ್ನು ಮೂರು ತಿಂಗಳೊಳಗೆ ಎಲ್ಲ ಸಮಸ್ಯೆಗಳು ಮುಗಿಯಬೇಕು ಎಂದು ತಿಳಿಸಲಾಗಿದೆ ಹಾಗೂ ಸಾರ್ವಜನಿಕರು ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದಾಗ ಸ್ಪಂದಿಸಬೇಕು ಅದು ನಮ್ಮ ಜವಾಬ್ದಾರಿ, ಮುಂದಿನ ದಿನಗಳಲ್ಲಿ ಕರೆ ಸ್ವೀಕರಿಸದಿದ್ದರೆ ನನ್ನ ಗಮನಕ್ಕೆ ತನ್ನಿ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪಟ್ಟಣದ ಹದಿಮೂರು ವಾರ್ಡ್ಗಳಲ್ಲಿಯೂ ಸಾಕಷ್ಟು ಸಮಸ್ಯೆಗಳಿದ್ದು ಸ್ಥಳೀಯ ಶಾಸಕರು ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರ ಜೊತೆ ಸಭೆ ನಡೆಸಲಾಗಿದ್ದು ಬಂದಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಕುಡಿಯುವ ನೀರು, ಸ್ವಚ್ಛತೆ ಬೀದಿ ದೀಪ, ನಿರ್ವಹಣೆ ಜೊತೆಗೆ ಯುಜಿಡಿ ಕಾಮಗಾರಿ ನಡೆಸಲು ತಿಳಿಸಲಾಗಿದೆ. ಇದಕ್ಕೆ ಪಟ್ಟಣದ ನಾಗರಿಕರು ಸಹಕಾರ ನೀಡಬೇಕು, ಈಗಾಗಲೇ ಯುಜಿಡಿ ಸರ್ವೇ ಮುಗಿದಿದ್ದು ಸರ್ಕಾರಕ್ಕೆ ವರದಿ ನೀಡಲಾಗಿದೆ. ಸರ್ಕಾರ ಅನುದಾನ ಮಂಜೂರು ಮಾಡಿದ ತಕ್ಷಣ ಕಾಮಗಾರಿಗೆ ಪ್ರಾರಂಭಿಸಲಾಗುವುದು ಎಂದರು.

ಸಿಬ್ಬಂದಿ ಕೊರತೆ ನಿವಾರಣೆಗೆ ಕ್ರಮ: ಚಾಮರಾಜನಗರ ಜಿಲ್ಲೆಯ ನಗರಸಭೆ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ 664 ಸಿಬ್ಬಂದಿಗಳು ಇರಬೇಕಿತ್ತು. ಆದರೆ 220 ಸಿಬ್ಬಂದಿಗಳು ಇರುವುದರಿಂದ 444 ಸಿಬ್ಬಂದಿಗಳ ಕೊರತೆ ಇದೆ. ಈಗಾಗಲೇ ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆಯ ಸಚಿವರ ಜೊತೆ ಚರ್ಚೆ ನಡೆಸಲಾಗಿದ್ದು ಮುಂದಿನ ದಿನಗಳಲ್ಲಿ ಸಿಬ್ಬಂದಿಗಳನ್ನು ನೇಮಕ ಮಾಡುವುದರ ಮೂಲಕ ಸಮಸ್ಯೆ ಬಗೆಹರಿಸಲಾಗುವುದು ಎಂದರು.

13 ವಾರ್ಡ್ ಗಳಿಗೆ ಕೇವಲ ಆರು ಜನ ಕಾಯಂ ಪೌರ ಕಾರ್ಮಿಕರು ಇದ್ದದ್ದರಿಂದ ಸ್ವಚ್ಛತೆಗೆ ತೊಂದರೆಯಾಗಿತ್ತು ಇದೀಗ ಹೆಚ್ಚುವರಿ ಎಂಟು ಜನ ಪೌರಕಾರ್ಮಿಕ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ. ಇದರಿಂದ ಪಟ್ಟಣದ ಸ್ವಚ್ಛತೆಗೆ ಅನುಕೂಲವಾಗಲಿದೆ ಎಂದರು.

ಈ ಸ್ವತ್ತು ಸಮಸ್ಯೆ ನಿವಾರಣೆಗೆ ಕ್ರಮ: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆರ್ ಎಸ್ ದೊಡ್ಡಿ ಆಶ್ರಯ ಬಡಾವಣೆಯಲ್ಲಿ ಈ ಸ್ವತ್ತು ನೀಡುವ ಸಂಬಂಧ ಪಟ್ಟಣದ ಸಾರ್ವಜನಿಕರಿಂದ ಹಲವಾರು ದೂರುಗಳು ಬರುತ್ತಿದ್ದು ಈಗಾಗಲೇ ಉಪ ವಿಭಾಗಾಧಿಕಾರಿಗಳಿಗೆ ಈ ಬಗ್ಗೆ ಸರ್ವೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ. ಸರ್ಕಾರವು ಸಹ ಅನಧಿಕೃತ ಕಟ್ಟಡಗಳಿಗೆ ಗೆಜೆಟೆಡ್ ನೋಟಿಫಿಕೇಶನ್ ನಲ್ಲಿ ಕ್ಯಾಬಿನೆಟ್ ನಲ್ಲಿ ಚರ್ಚಿ ಮುಂದಿನ ತಿಂಗಳು ಆದೇಶ ಬರಲಿದೆ ಸರ್ಕಾರದ ಅಧೀನ ಕಾರ್ಯದರ್ಶಿಯವರ ಜೊತೆ ಚರ್ಚೆ ನಡೆಸಿದ್ದು ಇಡೀ ರಾಜ್ಯದಲ್ಲಿರುವ ಸಮಸ್ಯೆ ಇದಾಗಿದ್ದು ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದರು. ಇನ್ನು ಪ್ರಭಾರ ಅಭಿಯಂತರದ ಬದಲಿಗೆ ಪಟ್ಟಣ ಪಂಚಾಯಿತಿಗೆ ಅಭಿಯಂತರರನ್ನು ನಿಯೋಜನೆ ಮಾಡಲಾಗುವುದು ಎಂದರು.

ಮುಖ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿಗಳು: ಪಟ್ಟಣ ಪಂಚಾಯಿತಿಯಲ್ಲಿ ಇರುವ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಅದನ್ನು ಬಿಟ್ಟು ಎರಡುವರೆ ಲಕ್ಷ ಕಾಮಗಾರಿ ಮಾಡಲು ಎರಡುವರೆ ವರ್ಷ ಬೇಕಾ ಇದನ್ನು ನೋಡಿದರೆ ನಿಮ್ಮ ಕಾರ್ಯವೈಕರಿ ಹೇಗಿದೆ ಎಂಬುದು ತಿಳಿಯುತ್ತದೆ ಈ ಕೂಡಲೇ ಅನುದಾನವನ್ನು ತಮ್ಮ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತರಾಟೆಗೆ ತೆಗೆದುಕೊಂಡರು.

ಇಂದಿರಾ ಕ್ಯಾಂಟೀನ್ ಪ್ರಾರಂಭಿಸಿ: ಪಟ್ಟಣ ಪಂಚಾಯಿತಿ ಸುದೇಶ್ ಮಾತನಾಡಿ ಈಗಾಗಲೇ ಬಡವರ ಹಸಿವು ನೀಗಿಸಲು ಹನೂರು ತಾಲೂಕಿಗೆ ಇಂದಿರಾ ಕ್ಯಾಂಟೀನ್ ಮಂಜೂರಾಗಿದೆ. ಸರ್ಕಾರಿ ಆಸ್ಪತ್ರೆಯ ಬಳಿ ನಿವೇಶ ನಿಗದಿ ಮಾಡಿದ್ದು ಆ ಸ್ಥಳದಲ್ಲಿಯೇ ಇಂದಿರಾ ಕ್ಯಾಂಟೀನ್ ತೆರೆಯಬೇಕು ಎಂದು ಮನವಿ ಮಾಡಿದರು.

ಸದಸ್ಯ ಹರೀಶ್ ಕುಮಾರ್ ಮಾತನಾಡಿ ಪಟ್ಟಣದಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳು ಸರಿಯಾಗಿ ಆಗುತ್ತಿಲ್ಲ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಜನಪ್ರತಿನಿಧಿಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಹೀಗಾಗಿ ಅಭಿವೃದ್ಧಿಗೆ ಹಿನ್ನಡೆ ಯಾಗುತ್ತಿದೆ ಸ್ವಚ್ಛತೆಗೂ ಆದ್ಯತೆ ನೀಡುತ್ತಿಲ್ಲ ಎಂದು ಆರೋಪಿಸಿದರು.

ಸದಸ್ಯ ಸೋಮಶೇಖರ್ ಮಾತನಾಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹತ್ತನೇ ವಾರ್ಡಿನಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಈಗಾಗಲೇ ಮುಖ್ಯಾಧಿಕಾರಿಗಳಿಗೆ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದರು ಯಾವುದೇ ಪ್ರಯೋಜನವಾಗಿಲ್ಲ, ತಾವುಗಳು ನಿರ್ದೇಶನ ನೀಡಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಮುಮ್ತಾಜ್ ಬಾನು ಉಪಾಧ್ಯಕ್ಷ ಆನಂದ್ ಕುಮಾರ್, ಸದಸ್ಯರಾದ ಗಿರೀಶ್, ಹರೀಶ್ ಸುದೇಶ್ಸೋ, ಮಶೇಖರ್, ರೂಪ, ಮಂಜುಳಾ ,ಪವಿತ್ರ, ಮಹೇಶ್ ನಾಯಕ, ತಹಸಿಲ್ದಾರ್ ಗುರುಪ್ರಸಾದ್, ಮುಖ್ಯಾಧಿಕಾರಿ ಅಶೋಕ್, ಎಇಇ ಮಂಜುನಾಥ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

5 mins ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

15 mins ago

BJP ಎಂಎಲ್‌ಸಿ ಸಿ.ಟಿ ರವಿ ಬಂಧನ

ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…

32 mins ago

ಸಿ. ಟಿ ರವಿ ಅವಾಚ್ಯ ಪದ ಬಳಕೆ ; ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…

46 mins ago

ಅಂಬೇಡ್ಕರ್‌ಗೆ ಅವಮಾನ | ಮೈಸೂರಲ್ಲಿ ಅಮಿತ್‌ ಶಾ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…

1 hour ago

ಸಿ.ಟಿ. ರವಿಗೆ ಮುತ್ತಿಗೆ ಹಾಕಿ ಹಲ್ಲೆಗೆ ಯತ್ನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಂಬಲಿಗರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…

2 hours ago