ಗುತ್ತಿಗೆದಾರರ ಸಂಘದ ಮುಖಂಡರಿಂದ ಆರೋಪ
ಚಾಮರಾಜನಗರ: ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಧಿಕೃತ ಗುತ್ತಿಗೆದಾರರಿಗೆ ಮೀಸಲಿರುವ ಕಾಮಗಾರಿಗಳನ್ನು ಪರವಾನಗಿ ಪಡೆಯದ ಗುತ್ತಿಗೆದಾರರಿಗೆ ಮಂಜೂರು ಮಾಡಿಸಿ ತಾರತಮ್ಯ ಮಾಡಿದ್ದಾರೆ ಎಂದು ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ತಾಲೂಕು ಗೌರವಾಧ್ಯಕ್ಷ ಸಿ.ಕೆ. ಮಂಜುನಾಥ್ ಆರೋಪಿಸಿದರು.
ಪರವಾನಗಿ ಪಡೆದಿರುವ ಎಸ್ಸಿ,ಎಸ್ಟಿ ಗುತ್ತಿಗೆದಾರರಿಗೆ ಶೇ.೨೫ ರಷ್ಟು ಕಾಮಗಾರಿಗಳು ಮೀಸಲಿವೆ. ಆದರೆ, ಶಾಸಕರು ಗುತ್ತಿಗೆ ಪರವಾನಗಿ ಪಡೆದಿಲ್ಲದವರಿಗೆ ಕಾಮಗಾರಿಗಳನ್ನು ನೀಡುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಶೇ.೪೦ ಕಮಿಷನ್ ಆರೋಪ ಮಾಡುವ ಕಾಂಗ್ರೆಸ್ ನಾಯಕರು ತಮ್ಮ ಪಕ್ಷದ ಶಾಸಕರಿಂದ ನಡೆಯುತ್ತಿರುವ ಅನ್ಯಾಯವನ್ನು ಸರಿಪಡಿಸುವ ಕೆಲಸ ಮಾಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಎಸ್ಸಿ, ಎಸ್ಟಿಗೆ ಮೀಸಲಿರುವ ಕಾಮಗಾರಿಗಳನ್ನು ಹಿರಿತನದ ಮೇಲೆ ನೀಡಬೇಕು. ತಮಗೆ ಬೇಕಾದವರಿಗೆ “ಕಾಮಗಾರಿಗಳನ್ನು ನೀಡುವಂತೆ ಶಿಫಾರಸ್ಸು ಮಾಡುವ ಶಾಸಕರು ನಮ್ಮ ಪರವಾಗಿ ಯಾವತ್ತು ಹೋರಾಟ ಮಾಡಿಲ್ಲ. ಅಲ್ಲದೇ ವಿಧಾನಸೌಧದಲ್ಲೂ ಧ್ವನಿ ಎತ್ತಿಲ್ಲ. ಇವರಿಗೂ ಗುತ್ತಿಗೆ ಮೀಸಲಾತಿಗೂ ಏನು ಸಂಬAಧ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ನಿಧಿಯಡಿ ರಾಜ್ಯ ಸರ್ಕಾರವು ಪ್ಯಾಕೇಜ್ ಮೂಲಕ ಕಾಮಗಾರಿಗೆ ಆದೇಶಿಸಿದೆ. ಇದರ ವಿರುದ್ಧ ಹೈಕೋರ್ಟ್ನಲ್ಲಿ ಮೊಕದ್ದಮೆ ದಾಖಲಿಸಲಾಗಿದ್ದು ಸಂಬAಧಪಟ್ಟ ಅಧಿಕಾರಿಗಳಿಗೆ ನೋಟಿಸ್ ನೀಡಿದೆ. ಏನೇ ಆದೇಶ ಮಾಡಿದರೂ ಷರತ್ತಿಗೆ ಬದ್ಧರಾಗುವಂತೆ ನೋಟಿಸ್‌ನಲ್ಲಿ ತಿಳಿಸಿದೆ. ಈ ಸಮಸ್ಯೆ ಇತ್ಯರ್ಥವಾಗುವ ತನಕ ಟೆಂಡರ್ ಸಂಬAಧ ಯಾವುದೇ ಪ್ರಕ್ರಿಯೆ ನಡೆಸಬಾರದು. ಈ ಸಂಬAಧ ೯ ಜಿಲ್ಲೆಗಳಲ್ಲಿ ತಡೆಯಾಜ್ಞೆ ನೀಡಲಾಗಿದೆ ಎಂದರು.
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರ ರೈತರ…
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…
ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್ ಎನ್‌ಕೌಂಟರ್ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
50 ವರ್ಷಗಳ ದೂರದೃಷ್ಟಿಯ ಡಿಪಿಆರ್ ಸಿದ್ಧ ಆಗಬೇಕು • ಭಾಮಿ ವಿ ಶೆಣೈ, ಮೈಸೂರು ಗ್ರಾಹಕರ ಪರಿಷತ್ ಮೈಸೂರು ಜಿಲ್ಲಾ…
ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು;…
ಬೆಂಗಳೂರು: ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ರೂ. ಮೊತ್ತದ 10 ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ…