ಹನೂರು: ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳು ದೈಹಿಕವಾಗಿ ಆರೋಗ್ಯವಂತರಾಗಿರಲು ಪೌಷ್ಟಿಕ ಆಹಾರ ವಿತರಣೆ ಮಾಡುತ್ತಿದ್ದು, ಪ್ರತಿಯೊಬ್ಬರು ಇದನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು.
ಹನೂರು ಶೈಕ್ಷಣಿಕ ವಲಯದ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸಪ್ಪನ ದೊಡ್ಡಿ ಶಾಲೆಯಲ್ಲಿ ಅಕ್ಷರ ದಾಸೋಹ ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜಿಮ್ ಪ್ರೇಮ್ ಜಿ ಫೌಂಡೇಶನ್ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ಧಿಸಲು ಹಮ್ಮಿಕೊಳ್ಳಲಾಗಿದ್ದ ಮೊಟ್ಟೆ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಯೋಜನೆ ಯಡಿ ಹಾಲು, ರಾಗಿ ಮಾಲ್ಟ್, ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ, ಶೂ ಮೊಟ್ಟೆ ವಿಧಾನ ಮಾಡಲಾಗುತ್ತಿದೆ. ಶಾಲಾ ವಿದ್ಯಾರ್ಥಿಗಳಿಗೆ ವಾರದ ಆರು ದಿನವೂ ಮೊಟ್ಟೆ ವಿತರಣೆ ಮಾಡಲು ಅಜಿಂ ಪ್ರೇಮ್ ಜಿ ಪ್ರತಿಷ್ಠಾನದ ಸಹಯೋಗದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಸೆಪ್ಟೆಂಬರ್ 25 ರಿಂದ ವಾರದ ಆರು ದಿನವೂ ಮೊಟ್ಟ ವಿತರಣೆ ಮಾಡಲು ಚಾಲನೆ ನೀಡಲಾಗುತ್ತಿದೆ. ಇದು ಸಂತಸದ ವಿಚಾರ, ಸರ್ಕಾರ ಈ ಮೊದಲು ಎರಡು ದಿನ ಮೊಟ್ಟೆ ಬಾಳೆಹಣ್ಣು ಕಡಲೆ ಮಿಠಾಯಿ ವಿತರಿಸಲಾಗುತ್ತಿತ್ತು. ಈ ನಿಟ್ಟಿನಲ್ಲಿ ಸರ್ಕಾರ ನೀಡುವ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ವಿದ್ಯಾಭ್ಯಾಸ ಮಾಡುವುದರ ಮೂಲಕ ಶಾಲೆಗೆ ಹಾಗೂ ಶೈಕ್ಷಣಿಕ ವಲಯಕ್ಕೆ ಕೀರ್ತಿ ತರುವಂತಹ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ವೇದಿಕೆ ಕಾರ್ಯಕ್ರಮದ ಬಳಿಕ ಶಾಸಕ ಎಂ.ಆರ್.ಮಂಜುನಾಥ್ ಮಕ್ಕಳ ಸಾಲಿನಲ್ಲಿ ಕುಳಿತು ಉಪಹಾರ ಸೇವಿಸಿ ತಮ್ಮ ಸರಳತೆ ಮೆರೆದರು.
ಈ ಸಂದರ್ಭದಲ್ಲಿ ತಾ.ಪಂ.ಕಾರ್ಯನಿರ್ವಾಹಣಧಿಕಾರಿ ಉಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ, ಅಕ್ಷರ ದಾಸೋಹ ವಿಭಾಗದ ರಂಗಸ್ವಾಮಿ, ಗ್ರಾ.ಪಂ.ಅಧ್ಯಕ್ಷ ಮುತ್ತುರಾಜು, ಪಿಡಿಒಮಾದೇಶ್ ಎಸ್.ಡಿ.ಎಂ.ಸಿ.ಅಧ್ಯಕ್ಷ ಮಲ್ಲೇಶ್, ಮುಖ್ಯ ಶಿಕ್ಷಕ ವೀರಪ್ಪ ಇನ್ನಿತರರು ಇದ್ದರು.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…