ಚಾಮರಾಜನಗರ: ನಾಡಿನೆಲ್ಲೆಡೆ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆಮಾಡಿದ್ದು, ಗಡಿ ಜಿಲ್ಲೆ ಚಾಮರಾಜನಗರದ ಪ್ರಮುಖ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದುಬರುತ್ತಿದೆ.
ಜಿಲ್ಲೆಯ ಮಲೆಮಹದೇಶ್ವರ ಬೆಟ್ಟ, ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಪಾರ್ವತಿ ಬೆಟ್ಟ ಸೇರಿದಂತೆ ಹಲವು ದೇವಾಲಯಗಳಿಗೆ ಭಕ್ತರ ದಂಡೇ ಹರಿದು ಬರುತ್ತಿದ್ದು, ಕಾಲಿಡಲು ಕೊಂಚವೂ ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನು ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಲಕ್ಷಾಂತರ ಮಂದಿ ಸಾರ್ವಜನಿಕರು ಭೇಟಿ ನೀಡಿದ್ದು, ಮಹದೇಶ್ವರನ ಸನ್ನಿಧಿ ಭಕ್ತರಿಂದ ತುಂಬಿ ತುಳುಕುತ್ತಿದೆ.
ಇನ್ನು ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಪಾರ್ವತಿಬೆಟ್ಟ, ಬಿಳಿಗಿರಿರಂಗನಬೆಟ್ಟ ಸೇರಿದಂತೆ ಚಾಮರಾಜನಗರ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೂ ಸಹಸ್ರಾರು ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.





