ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಮನೆಮಾಡಿದ್ದು, ರಾಜ್ಯ ಮಾತ್ರವಲ್ಲದೇ ಹೊರರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಿದ್ದಾರೆ.
ದೀಪಾವಳಿ ಜಾತ್ರೆಯ ಅಂಗವಾಗಿ ಮಲೆಮಹದೇಶ್ವರ ಬೆಟ್ಟದಲ್ಲಿ ವಿಶೇಷಾ ಪೂಜಾ ಕೈಂಕರ್ಯಗಳು ನೇರವೇರಿದ್ದು, ಲಕ್ಷಾಂತರ ಮಂದಿ ಭಕ್ತರು ಬೆಟ್ಟಕ್ಕೆ ಭೇಟಿ ನೀಡುತ್ತಿದ್ದಾರೆ.
ದೀಪಾವಳಿ ಜಾತ್ರೆಯ ಹಿನ್ನೆಲೆಯಲ್ಲಿ ನಿನ್ನೆಯೂ ಮಹದೇಶ್ವರ ಸ್ವಾಮಿಯ ಬೆಳ್ಳಿ ರಥೋತ್ಸವವು ಅತ್ಯಂತ ವಿಜೃಂಭಣೆಯಿಂದ ನಡೆಯಿತು.
ಜೊತೆಗೆ ಭಕ್ತರು, ಬಸವವಾಹನ, ಹುಲಿ ವಾಹನ, ರುದ್ರಾಕ್ಷಿ ಮಂಟಪ ಸೇವೆ, ಉರುಳು ಸೇವೆ ಮತ್ತು ಪಂಜಿನ ಸೇವೆಗಳನ್ನು ಸಮರ್ಪಿಸಿ ಹರಕೆ ತೀರಿಸಿದರು.
ಇನ್ನು ಜಾತ್ರೆಯ ಅಂಗವಾಗಿ ಸಹಸ್ರಾರು ಜನರು ಕಾಲ್ನಡಿಗೆಯಲ್ಲೇ ಬೆಟ್ಟಕ್ಕೆ ಆಗಮಿಸಿದ್ದು, ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಬೆಟ್ಟಕ್ಕೆ ಬರುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.





