ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಮೇವು ನೀರು ಅರಸಿ ಜಮೀನಿನತ್ತ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ ನಾಯಿ ದಾಳಿ ಮಾಡಿದ ಪರಿಣಾಮ ಜಿಂಕೆ ಸಾವನ್ನಪ್ಪಿರುವ ಘಟನೆ ಹನೂರು ತಾಲ್ಲೂಕಿನ ಕಣ್ಣೂರು ಗ್ರಾಮದಲ್ಲಿ ನಡೆದಿದೆ.
ಕಣ್ಣೂರು ಗ್ರಾಮದ ಚಿಕ್ಕರಾಚೇಗೌಡರ ಜಮೀನಿನತ್ತ ಕಾಡಿನಿಂದ ಜಿಂಕೆಯೊಂದು ಮೇವು ನೀರು ಅರಸಿ ಬಂದಿತ್ತು. ಇದನ್ನು ನೋಡಿದ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ ಪರಿಣಾಮ ಜಿಂಕೆಯ ಕಾಲಿನಲ್ಲಿ ರಕ್ತ ತೀವ್ರ ರಕ್ತಸ್ರಾವವಾಗುತ್ತಿತ್ತು. ಜಮೀನಿನ ಮಾಲೀಕರು ಪ್ರಥಮ ಚಿಕಿತ್ಸೆ ನೀಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳು ನಿಗದಿತ ಸಮಯದೊಳಗೆ ಬಾರದೆ ಒಂದು ಗಂಟೆ ಬಿಟ್ಟು ಬಂದಿದ್ದರಿಂದ ಗಾಯಗೊಂಡಿದ್ದ ಜಿಂಕೆ ಮೃತಪಟ್ಟಿದೆ. ಅರಣ್ಯ ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿಗೆ ಪರಿಸರ ಪ್ರೇಮಿಗಳು ಆಕ್ರೋಶ ಹೊರಹಾಕಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…