ಚಾಮರಾಜನಗರ : ಹಣ ದ್ವಿಗುಣ ಮಾಡುವುದಾಗಿ ನಂಬಿಸಿ ತಮಿಳುನಾಡು ಮೂಲದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ.ವಂಚನೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ತಮಿಳುನಾಡು ಮೂಲದ ಅವಿನಾಷಿ ಸಚ್ಚಿದಾನಂದ ಎಂಬುವವರು ಈ ಸಂಬಂಧ ನಗರದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅನ್ಸಾರಿ, ಸೈಯದ್ ಇಮ್ರಾನ್ ಸೇರಿದಂತೆ 7 ಜನರ ವಿರುದ್ಧ ದೂರು ನೀಡಿದ್ದಾರೆ.
ಸಚ್ಚಿದಾನಂದ ಗಾರ್ಮೆಂಟ್ಸ್ ವ್ಯಾಪಾರಿಯಾಗಿದ್ದು, ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದರು. ಈತನಿಗೆ ಅನ್ಸಾರಿ ಎಂಬ ವ್ಯಕ್ತಿ ಪರಿಚಯವಾಗಿದ್ದ. ಈತ ನಿಮ್ಮ ಹಣವನ್ನು ಡಬಲ್ ಮಾಡಿಕೊಡುತ್ತೇವೆ ಎಂದು ಸಚ್ಚಿದಾನಂದ ಅವರನ್ನು ನಂಬಿಸಿ ನಗರಕ್ಕೆ ಬರಲು ಹೇಳಿದ್ದಾನೆ. ಅನ್ಸಾರಿಯ ಮಾತನ್ನು ನಂಬಿದ ಸಚ್ಚಿದಾನಂದ 3 ಲಕ್ಷ ರೂ. ಹಣ ತೆಗೆದುಕೊಂಡು ನಗರದ ಖಾಸಗಿ ಹೊಟೇಲ್‌ಗೆ ಆಗಮಿಸಿ ರೂಂ ಮಾಡಿಕೊಂಡು ಉಳಿದುಕೊಂಡಿದ್ದಾನೆ ಎಂದು ಹೇಳಲಾಗಿದೆ.
ಈ ರೂಂ ಗೆ ಪೊಲೀಸ್ ಸಮವಸ್ತ್ರದಲ್ಲಿದ್ದ ವ್ಯಕ್ತಿಯೊಡನೆ ಇತರೆ ನಾಲ್ಕು ಮಂದಿ ಬಂದು ಸಚ್ಚಿದಾನಂದರನ್ನು ಹೆದರಿಸಿದ್ದಾರೆ. ನೀನು ಕಾನೂನು ಬಾಹಿರ ಚಟುವಟಿಕೆಯಲ್ಲಿ ಬಾಗಿಯಾಗಿದ್ದೀಯ ನಿನ್ನನ್ನು ಬಂಧಿಸುತ್ತೇವೆ ಎಂದು ಹೇಳಿ ಆತನ ಬಳಿ ಇದ್ದ 3 ಲಕ್ಷ ರೂ.ಗಳನ್ನು ಕಿತ್ತುಕೊಂಡಿದ್ದಾರೆ. ನಿನ್ನ ಮೇಲೆ ಕೇಸ್ ಮಾಡಬಾರದು ಎಂದರೆ ಇನ್ನೂ ಒಂದು ಲಕ್ಷ ರೂ.ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಸಚ್ಚಿದಾನಂದ ಸೈಯದ್ ಇಮ್ರಾನ್ ಎಂಬುವವರ ಖಾತೆಗೆ 70 ಸಾವಿರ ರೂ.ಗಳನ್ನು ಕಳುಹಿಸಿದಾಗ ನನ್ನನ್ನು ಬಿಟ್ಟು ಕಳುಹಿಸಿದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…