ಚಾಮರಾಜನಗರ

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ ಇರುವುದರಿಂದ ಈ ಬಾರಿಯ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಪಿಜಿ ಪಾಳ್ಯ ಗ್ರಾಮದ ಕ್ರಿಶ್ಚಿಯನ್ ಸಮುದಾಯದ ಮಹಿಳೆಯರು ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.

ಹನೂರು ತಾಲ್ಲೂಕಿನ ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದ ಕ್ರಿಶ್ಚಿಯನ್ ಸಮುದಾಯದ ಬಡಾವಣೆಯಲ್ಲಿ ಕಳೆದ ಹಲವಾರು ತಿಂಗಳಿನಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೇ ಇರುವುದರಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ.

ಈ ಸಂಬಂಧ ಕಳೆದ ವರ್ಷವೂ ಸಹ ನಮ್ಮ ಕ್ರಿಶ್ಚಿಯನ್ ಸಮುದಾಯದ ಬಡಾವಣೆಗೆ ಕೊಳವೆ ಬಾವಿ ಒರೆಸುವಂತೆ ಮನವಿ ಮಾಡಲಾಗಿತ್ತು. ಆದರೂ ಕೊಳವೆಬಾವಿ ಕೂರೆಸಲಿಲ್ಲ. ಇದೀಗ ಮತ್ತೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಸಮಸ್ಯೆಯನ್ನು ಬಗೆಹರಿಸುವಂತೆ ಮನವಿ ಮಾಡಿದ್ದರೂ ಇದುವರೆಗೂ ಯಾವುದೇ ಪ್ರಯೋಜನ ಆಗಿಲ್ಲ. ನಮ್ಮ ಸಮಸ್ಯೆಯನ್ನು ಆಲಿಸುವವರು ಯಾರು ಎಂದು ಪ್ರಶ್ನಿಸಿದ್ದಾರೆ.

ಇನ್ನು ಗ್ರಾಮದ ಮಹಿಳೆಯರು ಮಾತನಾಡಿ, ನಮ್ಮ ಕ್ರಿಶ್ಚಿಯನ್ ಸಮುದಾಯದ ಬಡಾವಣೆಗೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಮತಭಿಕ್ಷೆಗಾಗಿ ಎಲ್ಲರೂ ಮನೆ ಬಳಿ ಬರುತ್ತಾರೆ. ಆದರೆ ಇದೀಗ ಸಮಸ್ಯೆಯನ್ನು ಆಲಿಸುವವರು ಯಾರು ಇಲ್ಲ. ಆದ್ದರಿಂದ ಈ ಬಾರಿಯ ಚುನಾವಣೆಯನ್ನು ಬಹಿಷ್ಕಾರ ಮಾಡುತ್ತಿದ್ದೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಚುನಾವಣೆಯಲ್ಲಿ ಪ್ರತಿಯೊಬ್ಬರು ನಮಗೆ ಮತ ನೀಡಿ ಎಂದು ಮನವಿ ಮಾಡುತ್ತೀರಾ, ಕುಡಿಯಲು ನೀರು ಇಲ್ಲದೆ ಪ್ರತಿದಿನ ತೊಂದರೆ ಅನುಭವಿಸುತ್ತಿದ್ದೇವೆ. ಬಟ್ಟೆ ಒಗೆಯಲು, ಸ್ನಾನ ಮಾಡಲು, ಶೌಚಾಲಯಕ್ಕೆ ಹೋಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನಪ್ರತಿನಿಧಿಗಳಾದವರು ಕಷ್ಟದ ಸಂದರ್ಭದಲ್ಲಿ ಸಮಸ್ಯೆಗೆ ಧ್ವನಿಯಾಗಬೇಕು. ಆದರೆ ಜನಪ್ರತಿನಿಧಿಗಳು ನಾವು ಬದುಕಿದ್ದೆವೋ ಸತ್ತಿದ್ದೇವೋ ಎಂಬುದನ್ನು ಯಾರು ಕೇಳುತ್ತಿಲ್ಲ. ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ನಮ್ಮ ಸಮಸ್ಯೆಯನ್ನು ಬಗೆಹರಿಸಬೇಕು. ನಾವು ಕುಡಿಯುವ ನೀರನ್ನು ಮಾತ್ರ ಕೇಳುತ್ತಿದ್ದೇವೆ. ಬೇರೇನು ಕೇಳುತ್ತಿಲ್ಲ. ಈ ಕೂಡಲೇ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ 50ಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಂಡಿದ್ದರು

 

ಆಂದೋಲನ ಡೆಸ್ಕ್

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

11 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

20 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

20 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

20 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

20 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

20 hours ago