ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ ತೊಟ್ಟಿಯಲ್ಲಿ ನೀರು ತುಂಬಿಸದೇ ಇರುವುದರಿಂದ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಆದಷ್ಟು ಬೇಗ ನೀರಿನ ತೊಟ್ಟಿಗೆ ನೀರು ತುಂಬಿಸಿ ಸಮಸ್ಯೆಯನ್ನು ಬಗೆಹರಿಸುವಂತೆ ರೈತ ಮುಖಂಡರು ಒತ್ತಾಯಿಸಿದ್ದಾರೆ.
ಕೊಪ್ಪ ಗ್ರಾಮದಲ್ಲಿ ನೂರಾರು ನಾಟಿ ದನಗಳಿದ್ದು, ಅರಣ್ಯದಲ್ಲಿ ಮೇವು ಮೇಯ್ದು ಬಂದ ನಂತರ ನೀರು ಕುಡಿಯಲು ತೊಟ್ಟಿಯಲ್ಲಿ ನೀರಿಲ್ಲ. ಇದರಿಂದ ಜಾನುವಾರುಗಳು ಪರಿತಪಿಸುತ್ತಿದೆ.
ಜಾನುವಾರುಗಳು ಕೊಳವೆ ಬಾವಿಯ ಪೈಪ್ ಗಳಲ್ಲಿ ಸೋರುತ್ತಿರುವ ನೀರನ್ನು ನೆಕ್ಕುತ್ತಿವೆ. ಕೆಲವು ಹಸುಗಳು ನೀರಿಲ್ಲದೆ ಇರುವುದರಿಂದ ನೀರಿನ ದಾಹ ಸೇರಿಸಿಕೊಳ್ಳಲು ಸಾಧ್ಯವಾಗದೆ ಪರಿತಪಿಸುತ್ತಿದೆ. ಅಧಿಕಾರಿಗಳು ಮೂಕ ಪ್ರಾಣಿಗಳಿಗೆ ಕುಡಿಯುವ ನೀರಿನ ಸೌಲಭ್ಯ ಮಾಡದೆ ಇರುವುದರಿಂದ ರೈತ ಮುಖಂಡರುಗಳು ಸಾಮಾಜಿಕ ಜಾಲತಾಣಗಳಲ್ಲಿ ಅಧಿಕಾರಿಗಳ ವಿರುದ್ಧ ಅಕ್ರೋಶ ಹೊರಹಾಕಿದ್ದಾರೆ.
ಭಾರತೀಯ ಕಿಸಾನ್ ಸಂಘದ ಮುಖಂಡ ಸದಾಶಿವ ಬೆಟ್ಟಪ್ಪ ಎಂಬುವವರು ಮೂಕ ಪ್ರಾಣಿಗಳ ರೋಧನೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…