ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ತಾಲ್ಲೂಕು ಪಂಚಾಯಿತಿ ಇಒಗೆ ದೂರು ನೀಡಿರುವ ಘಟನೆ ಶೆಟ್ಟಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದ ಅಂಬೇಡ್ಕರ್ ಬಡಾವಣೆಯ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದನೆ ಮಾಡುತ್ತಿಲ್ಲ ಎಂದು ದೂರು ಸಲ್ಲಿಸಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ: ಶೆಟ್ಟಳ್ಳಿ ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಕುಡಿಯುವ ನೀರು ಸಮಸ್ಯೆ ಉಂಟಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದರೂ ಉಡಾಫೆ ಉತ್ತರ ನೀಡುತ್ತಿದ್ದಾರೆ. ಹಾಗಾಗಿ ಕುಡಿಯುವ ನೀರಿನ ಸಮಸ್ಯೆಯಿಂದ ನಿವಾಸಿಗಳಿಗೆ ತೊಂದರೆಯಾಗಿದೆ. ಹಾಗಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ
ಗ್ರಾಮದ ಮಹಿಳೆಯರು ತಾಲ್ಲೂಕು ಪಂಚಾಯತ್ ವ್ಯವಸ್ಥಾಪಕ ಪ್ರಕಾಶ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ನಂತರ ಗ್ರಾಮದ ಮಹಿಳೆಯರು ಮಾತನಾಡಿ, ನಮ್ಮ ಅಂಬೇಡ್ಕರ್ ಬಡಾವಣೆ ನಿವಾಸಿಗಳಿಗೆ ಕಳೆದ ಮೂರು ತಿಂಗಳಿನಿಂದಲೂ ಸಹ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಈ ಸಮಸ್ಯೆ ಬಗೆಹರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ. ಹಾಗಾಗಿ ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ನೀರು ಸರಬರಾಜು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ತಾಲೂಕು ಪಂಚಾಯಿತಿ ವ್ಯವಸ್ಥಾಪಕರಾದ ಪ್ರಕಾಶ್ ಮನವಿ ಸ್ವೀಕರಿಸಿದ ನಂತರ ಮಾತನಾಡಿ, ಶೆಟ್ಟಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಬಗ್ಗೆ ಇದೀಗ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಕ್ಷಣವೇ ತರಲಿದ್ದು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…