ಚಾಮರಾಜನಗರ: ಬಸ್ ನಿಲ್ಲಿಸಿಲ್ಲ ಎಂಬ ಕಾರಣಕ್ಕೆ ಚಾಲಕನ ಮೇಲೆ ವ್ಯಕ್ತಿಗಳಿಬ್ಬರು ಹಲ್ಲೆ ಮಾಡಿರುವ ಅಮಾನವೀಯ ಘಟನೆ ತಾಲ್ಲೂಕಿನ ಇರಸವಾಡಿ ಬಳಿ ನಡೆದಿದೆ.
ಸಾರಿಗೆ ಸಂಸ್ಥೆ (KSRTC) ಬಸ್ ಚಾಲಕ ವಿಜಯಕುಮಾರ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇರಸವಾಡಿ ಗ್ರಾಮದಲ್ಲಿ ಬಸ್ ನಿಲ್ಲಿಸಿಲ್ಲವೆಂದು ಇರಸವಾಡಿ ಗ್ರಾಮದ ಕೃಷ್ಣಶೆಟ್ಟಿ ಮತ್ತು ಪುಟ್ಟಸ್ವಾಮಿ ಎಂಬುವವರು ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.
ಈ ಸಂಬಂಧ ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.