ಹನೂರು: ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನಿಗೆ ಮೂರ್ಛೆರೋಗ ಕಾಣಿಸಿಕೊಂಡು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಜರುಗಿದೆ.
ತಾಲೂಕಿನ ಒಡೆಯರ ಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಮುಂಭಾಗದ ತಿರುವಿನಲ್ಲಿ ಈ ಘಟನೆ ನಡೆದಿದ್ದು ಅದೃಷ್ಟವಶಾತ್ ಯಾವುದೇ ಅನಾಹುತ ಸಂಬಂಧಿಸಿಲ್ಲ. ಬಸ್ ಮುಂಭಾಗದಲ್ಲಿ ಕುಳಿತಿದ್ದ ಸುಮಾರು ಐದಾರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಒಂದೊಮ್ಮೆ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆಯದೆ ಹೋಗಿದ್ದರೆ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯ ಎಡಭಾಗಕ್ಕೆ ಬಿದ್ದು ಪಲ್ಟಿಯಾಗಿ ಅಪಾರ ಪ್ರಮಾಣದ ಸಾವು ನೋವು ಸಂಭವಿಸುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಪ್ರತಿದಿನ ಶಾಲಾ ಕಾಲೇಜು ವಿದ್ಯಾರ್ಥಿಗಳು ಕೊಳ್ಳೇಗಾಲ ಸೇರಿದಂತೆ ಇನ್ನಿತರ ಗ್ರಾಮಗಳಿಗೆ ವಿದ್ಯಾಭ್ಯಾಸಕ್ಕೆ ತೆರಳುತ್ತಿದ್ದರು. ಇಂದು ಭಾನುವಾರವಾಗಿರುವುದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು ತೆರಳದೇ ಇರುವುದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎನ್ನಲಾಗಿದೆ.
ಅಪಘಾತ ಸಂಭವಿಸಿರುವ ವಿಚಾರ ತಿಳಿಯುತ್ತಿದ್ದಂತೆ ಅಕ್ಕ ಪಕ್ಕ ಗ್ರಾಮದ ಸ್ಥಳೀಯ ನಿವಾಸಿಗಳು ಆಗಮಿಸಿ ಗಾಯಗೊಂಡಿದ್ದ ಪ್ರಯಾಣಿಕರನ್ನು ಖಾಸಗಿ ವಾಹನಗಳ ಮೂಲಕ ಆಸ್ಪತ್ರೆಗೆ ಕಳುಹಿಸಿಕೊಟ್ಟು ಮಾನವೀಯತೆ ಮೆರೆದಿದ್ದಾರೆ.
65 ವಾರಗಳಿಗೆ ಸಾಕಾಗುವಷ್ಟು ಮೇವು ಸಂಗ್ರಹ; ಜಿಲ್ಲೆಯಾದ್ಯಂತ ಒಟ್ಟು 2,12,504 ಟನ್ ಮೇವು ಲಭ್ಯ - ನವೀನ್ ಡಿಸೋಜ ಮಡಿಕೇರಿ…
ಪುರುಷರೂ ಎಚ್‌ಪಿವಿ ಲಸಿಕೆ ಪಡೆಯುವುದು ಸುರಕ್ಷಿತ: ಡಾ.ಯೋಗೇಂದ್ರಕುಮಾರ್ ಸಲಹೆ • ಹೇಮಂತ್‌ಕುಮಾರ್ ಮಂಡ್ಯ : ಹೆಣ್ಣು ಮಕ್ಕಳನ್ನು ಬಾಧಿಸುತ್ತಿರುವ ಗರ್ಭಕಂಠ…
ತನಿಖೆ ವೇಳೆ ಮತ್ತಷ್ಟು ಕಳ್ಳತನ ಮಾಡಿದ ಪ್ರಕರಣಗಳು ಬೆಳಕಿಗೆ ವಿರಾಜಪೇಟೆ : ಕಾಫಿ ಕಣದಲ್ಲಿ ಒಣಗಿಸಲು ಇಟ್ಟಿದ ಕಾಳು ಮೆಣಸು…
ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…
ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…
ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…