ಚಾಮರಾಜನಗರ

ಚಾಲಕನಿಗೆ ಕಾಣಿಸಿಕೊಂಡ ಮೂರ್ಛೆರೋಗ: ಮರಕ್ಕೆ ಡಿಕ್ಕೆ ಹೊಡೆದ ಕೆಎಸ್‌ಆರ್‌ಟಿಸಿ ಬಸ್‌

ಹನೂರು: ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನಿಗೆ ಮೂರ್ಛೆರೋಗ ಕಾಣಿಸಿಕೊಂಡು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಜರುಗಿದೆ.

ತಾಲೂಕಿನ ಒಡೆಯರ ಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಮುಂಭಾಗದ ತಿರುವಿನಲ್ಲಿ ಈ ಘಟನೆ ನಡೆದಿದ್ದು ಅದೃಷ್ಟವಶಾತ್ ಯಾವುದೇ ಅನಾಹುತ ಸಂಬಂಧಿಸಿಲ್ಲ. ಬಸ್ ಮುಂಭಾಗದಲ್ಲಿ ಕುಳಿತಿದ್ದ ಸುಮಾರು ಐದಾರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಒಂದೊಮ್ಮೆ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆಯದೆ ಹೋಗಿದ್ದರೆ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯ ಎಡಭಾಗಕ್ಕೆ ಬಿದ್ದು ಪಲ್ಟಿಯಾಗಿ ಅಪಾರ ಪ್ರಮಾಣದ ಸಾವು ನೋವು ಸಂಭವಿಸುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪ್ರತಿದಿನ ಶಾಲಾ ಕಾಲೇಜು ವಿದ್ಯಾರ್ಥಿಗಳು ಕೊಳ್ಳೇಗಾಲ ಸೇರಿದಂತೆ ಇನ್ನಿತರ ಗ್ರಾಮಗಳಿಗೆ ವಿದ್ಯಾಭ್ಯಾಸಕ್ಕೆ ತೆರಳುತ್ತಿದ್ದರು. ಇಂದು ಭಾನುವಾರವಾಗಿರುವುದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು ತೆರಳದೇ ಇರುವುದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎನ್ನಲಾಗಿದೆ.

ಅಪಘಾತ ಸಂಭವಿಸಿರುವ ವಿಚಾರ ತಿಳಿಯುತ್ತಿದ್ದಂತೆ ಅಕ್ಕ ಪಕ್ಕ ಗ್ರಾಮದ ಸ್ಥಳೀಯ ನಿವಾಸಿಗಳು ಆಗಮಿಸಿ ಗಾಯಗೊಂಡಿದ್ದ ಪ್ರಯಾಣಿಕರನ್ನು ಖಾಸಗಿ ವಾಹನಗಳ ಮೂಲಕ ಆಸ್ಪತ್ರೆಗೆ ಕಳುಹಿಸಿಕೊಟ್ಟು ಮಾನವೀಯತೆ ಮೆರೆದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago