ಗುಂಡ್ಲುಪೇಟೆ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.
ಪಟ್ಟಣದ ಕ್ಯಾಲಿಕಟ್ ರಸ್ತೆಯಲ್ಲಿ ಪೊಲೀಸರು ಗಸ್ತು ನಡೆಸುತ್ತಿದ್ದ ವೇಳೆ ದೊರೆತ ಖಚಿತ ಮಾಹಿತಿ ಮೇರೆಗೆ ಇನ್ಸ್‌ಪೆಕ್ಟರ್ ಜಯಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಾಕೀರ್ ಹುಸೇನ್ ನಗರದ ಸಲ್ಮಾನ್ ಹಾಗೂ ಇಮ್ರಾನ್ ಬಂಧಿತ ಆರೋಪಿಗಳು.
ದ್ವಿ ಚಕ್ರ ವಾಹನದಲ್ಲಿ ಮಾರಾಟ ಮಾಡಲು ತಂದಿದ್ದ ೧ ಕೆಜಿ ೬೦ ಗ್ರಾಂ. ಒಣ ಗಾಂಜಾವನ್ನು ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಸಬ್ ಇನ್ಸ್‌ಪೆಕ್ಟರ್ ಸಾಹೇಬಗೌಡ, ಸಿಬ್ಬಂದಿಗಳಾದ ಶಿವರಾಜು, ನಟೇಶ್ ದಾಳಿಯಲ್ಲಿ ಭಾಗವಹಿಸಿದ್ದರು.





