ಚಾಮರಾಜನಗರ

ಅಕ್ರಮವಾಗಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ

ಹನೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಹನೂರು ತಾಲೂಕಿನ ಉದ್ದಟಿ ಗ್ರಾಮದ ಮನ್ನಾದ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ.

ಉದ್ದಟಿ ಗ್ರಾಮದ ಮನ್ನಾದ ಹನೂರು ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸಂಪಿಗೇಶ್ವರ ದೇವಸ್ಥಾನದ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ನಿಂತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಹನೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಪ್ರಸಾದ್, ಕೊಳ್ಳೇಗಾಲ ಉಪ ವಿಭಾಗ ಡಿವೈಎಸ್ಪಿ ಧರ್ಮೇಂದ್ರ, ಇನ್ಸ್‌ಪೆಕ್ಟರ್ ಶಶಿಕುಮಾರ್ ರವರ ಮಾರ್ಗದರ್ಶನದಲ್ಲಿ ದಾಳಿ ನಡೆಸಿದಾಗ ವ್ಯಕ್ತಿಯ ಬಳಿ ಅಂದಾಜು ಮೌಲ್ಯ 8750ರೂ ಬೆಲೆಬಾಳುವ 175 ಗ್ರಾಂ ಒಣ ಗಾಂಜಾ ಪತ್ತೆಯಾಗಿದೆ. ನಂತರ ಆತನನ್ನು ವಶಕ್ಕೆ ಪಡೆದು ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

5 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

6 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

6 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

6 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

7 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

7 hours ago