ಮೈಸೂರು : ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಮೇಲೆ ಜಾರಿ ನಿರ್ದೇಶನಾಲಯವು ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂಬುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದ್ದು, ಇಡಿ ತನಿಖಾ ಸಂಸ್ಥೆ ಏಕೆ ರಾಜಕೀಯ ದಾಳವಾಗುತ್ತಿದೆ ಎಂದು ನೇರವಾಗಿ ಪ್ರಶ್ನೆ ಮಾಡಿದೆ ಎಂದು ಸಂಸದ ಸುನಿಲ್ ಬೋಸ್ ಹೇಳಿದ್ದಾರೆ.
ದೇಶವೊಂದರ ಪ್ರಮುಖ ತನಿಖಾ ಸಂಸ್ಥೆಗಳನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿಯು ದೇಶಾದ್ಯಂತ ಚುನಾವಣಾ ಪ್ರಣಾಳಿಕೆಯನ್ನು ಮುಂದಿಟ್ಟುಕೊಂಡು ಕೆಲಸ ರಾಜಕೀಯ ಮಾಡಬೇಕಾದ ಜಾಗದಲ್ಲಿ ವಿರೋಧಪಕ್ಷಗಳನ್ನು ಹೆದರಿಸಿ ಚುನಾವಣೆ ಮಾಡುತ್ತಿರುವುದು ನಿಜಕ್ಕೂ ಖಂಡನೀಯ ವಿಷಯವಾಗಿದ್ದು ಸುಪ್ರೀಂಕೋರ್ಟ್ ನ ಈ ಎಚ್ಚರಿಕೆಯು ರಾಜಕೀಯ ಪ್ರೇರಿತವಾಗಿ ವರ್ತಿಸುವ ತನಿಖಾ ಸಂಸ್ಥೆಗಳಿಗೆ ಅಗತ್ಯವಾಗಿ ನೀಡಬೇಕಿದ್ದ ಎಚ್ಚರಿಕೆ ಆಗಿದೆ ಎಂದರು.
ಪ್ರಜಾಪ್ರಭುತ್ವದ ಸೌಂದರ್ಯವಾದ ಜನಾಭಿಪ್ರಾಯವನ್ನು ಭ್ರಷ್ಟ ಗೊಳಿಸುವ ಬಿಜೆಪಿಗರ ಹೀನಾಯ ಪ್ರಯತ್ನಗಳು ಇಲ್ಲಿಗೇ ಕೊನೆಯಾಗಬೇಕು. ಇಲ್ಲವಾದರೆ ಮುಂದೆ ಜನರೇ ಇವರಿಗೆ ಪಾಠ ಕಲಿಸುವ ದಿನಗಳು ದೂರವಿಲ್ಲ ಎಂದು ತಿಳಿಸಿದ್ದಾರೆ.





