ಚಾಮರಾಜನಗರ

ಹಸುವಿನ ಸಗಣಿ, ಮಣ್ಣಿನ ಗಣೇಶ ಮಾಡಿ ಮಾದರಿಯಾದ ಈರಣ್ಣ

ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ ಈರಣ್ಣ ಎಂಬುವರು ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಕುಗ್ರಾಮ ತೊಳಸಿಕೆರೆ ಗ್ರಾಮದ ಈರಣ್ಣ ಎಂಬುವವರು ಕಳೆದ ಆರು ವರ್ಷಗಳಿಂದ ತಾವೇ ನಾಟಿ ಹಸುವಿನ ಸಗಣಿ ಹಾಗೂ ಮಣ್ಣಿನಿಂದ ಗಣೇಶ ಮೂರ್ತಿ, ಗಣೇಶನ ವಾಹನ ಇಲಿ, ಪೂಜೆ ಸಾಮಗ್ರಿಗಳನ್ನು ಮಣ್ಣಿನಲ್ಲಿ ತಯಾರು ಮಾಡಿ ಅದಕ್ಕೆ ಬಣ್ಣ ಬಳಿದು ಅಲಂಕಾರ ಮಾಡಿ ವಿಶೇಷ ಪೂಜೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಮಣ್ಣಿನ ಗಣಪತಿಯನ್ನು ನಿರ್ಮಾಣ ಮಾಡಲು ಒಂದು ವಾರ ಸಮಯ ತೆಗೆದುಕೊಂಡು ಮಂಟಪದೊಂದಿಗೆ ಮೂರ್ತಿ ನಿರ್ಮಾಣ ಮಾಡಿ ವಿವಿಧ ಬಗೆಯ ಕಲರ್ ಬಳಕೆ ಮಾಡಿ ಬಣ್ಣದ ಲೇಪನ ಮಾಡಿದ್ದಾರೆ.

ಈ ವೇಳೆ ಈರಣ್ಣ ಮಾತನಾಡಿ ಸರ್ಕಾರದ ಮಾರ್ಗಸೂಚಿಯಂತೆ ಪ್ರತಿಯೊಬ್ಬರು ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಮಣ್ಣಿನ ಗಣಪತಿಯನ್ನೇ ಬಳಕೆ ಮಾಡುವಂತೆ ಜಾಗೃತಿ ಮೂಡಿಸುತ್ತಿದ್ದಾರೆ. ಇದೇ ನಿಟ್ಟಿನಲ್ಲಿ ನಾನೇ ಕಳೆದ ಆರು ವರ್ಷಗಳಿಂದ ಗ್ರಾಮಸ್ಥರ ಸಹಕಾರದಿಂದ ಮಣ್ಣಿನ ಗಣಪತಿ ನಿರ್ಮಾಣ ಮಾಡಿ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

8 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

8 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

8 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

9 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

9 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

9 hours ago