ಚಾಮರಾಜನಗರ

ಉಪವಾಸ ಸತ್ಯಾಗ್ರಹ ಧರಣಿ ವೇಳೆ ವೃದ್ಧ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ಗ್ರಾಮಕ್ಕೆ ವಿದ್ಯುತ್ ಸರಬರಾಜು ಕಲ್ಪಿಸಬೇಕೆಂದು ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಧರಣಿಯಲ್ಲಿ ವೃದ್ಧನೊಬ್ಬ ಅಸ್ವಸ್ಥಗೊಂಡು ಡೋಲಿಯಲ್ಲಿ ಆಸ್ಪತ್ರೆಗೆ ಕರೆತಂದಿರುವ ಘಟನೆ ಮೆದಗನಾಣೆ ಗ್ರಾಮದಲ್ಲಿ ಭಾನುವಾರ ನಡೆದಿದೆ.

ತಾಲ್ಲೂಕಿನ ಮೆದಗನಾಣೆ ಗ್ರಾಮದ ಗಿರಿಪಂದ (80) ಎಂಬ ವೃದ್ಧನೇ ಅಸ್ವಸ್ಥಗೊಂಡು ಮಲೆ ಮಹದೇಶ್ವರ ಬೆಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ.

ಕಳೆದ ಎರಡು ದಿನಗಳಿಂದಲೂ ಸಹ ಗ್ರಾಮಕ್ಕೆ ವಿದ್ಯುತ್ ಸರಬರಾಜು ಕಲ್ಪಿಸಬೇಕು ಹಾಗೂ ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂಬ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹ ಧರಣಿಯಲ್ಲಿ ಗ್ರಾಮಸ್ಥರು ಎಲ್ಲರೂ ಸಹ ಹಗಲು ರಾತ್ರಿ ಎನ್ನದೆ ಭಾಗವಹಿಸುತ್ತಿದ್ದಾರೆ. ಗ್ರಾಮಕ್ಕೆ ವಿದ್ಯುತ್ ಸರಬರಾಜು ಮಾಡಲು ತಕ್ಷಣ ಕ್ರಮ ಕೈಗೊಳ್ಳುತ್ತೇವೆ ಎಂದು ಸತ್ಯಾಗ್ರಹ ಹಮ್ಮಿಕೊಂಡ ಮೊದಲ ದಿನವೇ ಹನೂರು ಚೆಸ್ಕಾಂ ಇಲಾಖೆಯ ಎಇಇ ರಂಗಸ್ವಾಮಿ ಸ್ಥಳಕ್ಕೆ ಬಂದು ಭೇಟಿ ನೀಡಿ ಮನವಿಯನ್ನು ಸ್ವೀಕರಿಸಿ ಭರವಸೆ ನೀಡಿದ್ದರು. ಆದರೆ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿಯಾಗುವವರೆಗೂ ಅಥವಾ ವಿದ್ಯುತ್ ಸಂಪರ್ಕ ಕಲ್ಪಿಸುವವರೆಗೂ ಸಹ ಉಪವಾಸ ಸತ್ಯಾಗ್ರಹ ಧರಣಿಯನ್ನು ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದು ಗ್ರಾಮಸ್ಥರು ಕುಳಿತಿದ್ದಾರೆ.

ಡೋಲಿಯಲ್ಲಿ ವೃದ್ಧನನ್ನು ಕರೆತಂದ ಗ್ರಾಮಸ್ಥರು: ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದ ವೃದ್ಧನೊಬ್ಬ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರೇ ಡೋಲಿ ಕಟ್ಟಿ ಒತ್ತುಕೊಂಡು ದಾರಿಯಲ್ಲಿ ಬರುತ್ತಿದ್ದರು. ಆ ಬಳಿಕ ಮಾರ್ಗ ಮಧ್ಯ ಅರಣ್ಯ ಇಲಾಖೆಯ ವಾಹನ ಒಂದು ಬಂದಿದ್ದು ವೃದ್ಧನನ್ನು ಆಸ್ಪತ್ರೆಗೆ ಸೇರಿಸಲು ನೆರವಾಗಿದೆ. ಇಂತಹ ಘಟನೆ ನಡೆಯಬಹುದು ಎಂಬ ಮುನ್ಸೂಚನೆ ಇದ್ದರೂ ಸಹ ಮುನ್ನೆಚ್ಚರಿಕೆ ಕ್ರಮ ವಹಿಸದೆ ನಿರ್ಲಕ್ಷ ವಹಿಸಿದ್ದಾರೆ ಅಧಿಕಾರಿಗಳು ಎಂದು ಪ್ರತಿಭಟನಾನಿರತರು ಆರೋಪಿಸಿದ್ದಾರೆ.

ಧರಣಿಯಲ್ಲಿ ಮೆದಗನಾಣೆ ಗ್ರಾಮದ ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರು, ಮಹಿಳೆಯರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

3 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

3 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

4 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

4 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

5 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

8 hours ago