ಚಾಮರಾಜನಗರ

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು ಬೆಳೆ ಸಂಪೂರ್ಣ ನಾಶವಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಜರುಗಿದೆ. ತಾಲೂಕಿನ ಅಜ್ಜೀಪುರ ಗ್ರಾಮದ ಪಳನಿ ಸ್ವಾಮಿ ಎಂಬ ರೈತನ ಕಬ್ಬು ಬೆಳೆ ಸಂಪೂರ್ಣ ಸುಟ್ಟು ಹೋಗಿದ್ದು ಲಕ್ಷಾಂತರ ರೂ ನಷ್ಟವಾಗಿದೆ.

ಘಟನೆ ವಿವರ
ಬುಧವಾರ ಮಧ್ಯಾಹ ಏಕಾಏಕಿ ಬೀಸಿದ ಬಿರುಗಾಳಿಯ ರಭಸಕ್ಕೆ ವಿದ್ಯುತ್ ತಂತಿಗಳು ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹತ್ತಿಕೊಂಡಿದೆ. ಈ ಬೆಂಕಿಯ ಕೆನ್ನಾಲಿಗೆ ಕೆಳಗಡೆ ಇದ್ದಂತಹ ಕಬ್ಬು ಬೆಳೆಯ ಮೇಲೆ ಬಿದ್ದು ಆರು ಎಕರೆಗೂ ಹೆಚ್ಚು ಕಬ್ಬು ಬೆಳೆ ನಾಶವಾಗಿದೆ.ಕೈಗೆ ಬಂದ ತುತ್ತು ಬಾಯಿಗೆ ಬಾರದ ಆಗೇ ಆಗಿದ್ದು, ಇದರಿಂದ ರೈತ ಪಳನಿಸ್ವಾಮಿ ಆತಂಕಕ್ಕೆ ಒಳಗಾಗಿದ್ದು ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ.

ವಿಷಯ ತಿಳಿದ ತಕ್ಷಣ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ತಿಳಿಸಿದ್ದಾರೆ. ಆದರೆ ಗಾಳಿಯ ರಭಸ ಹೆಚ್ಚು ಇದ್ದ ಕಾರಣ ಅಗ್ನಿಶಾಮಕ ವಾಹನ ಬರುವ ವೇಳೆಗೆ ಸಾಕಷ್ಟು ಪ್ರಮಾಣದಲ್ಲಿ ಕಬ್ಬುಬೆಳೆ ಬೆಂಕಿಗೆ ಆಹುತಿಯಾಗಿತ್ತು. ಆದರೂ ಸಹ ಮುಂಜಾಗಬಹುದಿತ್ತ ಹೆಚ್ಚಿನ ಅನಾಹುತವನ್ನು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಬೆಂಕಿಯನ್ನು ಸಂಪೂರ್ಣ ನಂದಿಸಿದರು.

ಸಾಲ ಮಾಡಿ ಕಬ್ಬು ಬೆಳೆಯನ್ನು ಮಾಡಿದಂತಹ ಪಳನಿ ಸ್ವಾಮಿ ಎಂಬ ರೈತನಿಗೆ ಇದೀಗ ಆಕಸ್ಮಿಕವಾಗಿ ಬೆಂಕಿ ಬಿದ್ದು ಲಕ್ಷಾಂತರ ರು ನಷ್ಟವಾಗಿದೆ. ಹಾಗಾಗಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಸಂಘಟನೆಗಳು ಹಾಗೂ ಪಳಮಿ ಸ್ವಾಮಿ ಒತ್ತಾಯ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

2 hours ago

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

5 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

5 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

5 hours ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

6 hours ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

6 hours ago