ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಚಂದಕವಾಡಿ ಹೋಬಳಿಯ ಅಟ್ಟುಗುಳಿಪುರ ಬಳಿ ವಿದ್ಯುತ್ ಲೈನ್ ಎಳೆಯಲಾಗಿದ್ದು, ಶಿಥಿಲಗೊಂಡಿರುವ ವಿದ್ಯುತ್ ಕಂಬ ಭಾರೀ ಅಪಾಯವನ್ನೇ ಆಹ್ವಾನಿಸುತ್ತಿದೆ.
ಈ ಬಗ್ಗೆ ಕಳೆದ ಕೆಲವು ತಿಂಗಳುಗಳಿಂದ ಜಮೀನು ಮಾಲೀಕರು ಚೆಸ್ಕಾಂಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಜಮೀನಿನಲ್ಲಿ ವ್ಯವಸಾಯ ಮಾಡುವ ವೇಳೆ ಏನಾದರೂ ಅಪಘಾತ ಸಂಭವಿಸುವ ಸಾಧ್ಯತೆಗಳಿವೆ. ಆದ್ದರಿಂದ ವ್ಯವಸಾಯ ಮಾಡುವುದನ್ನೇ ನಿಲ್ಲಿಸಲಾಗಿದೆ. ಈ ಕಂಬ ಅಕಸ್ಮಾತ್ ಬಿದ್ದು ಹೋದರೆ 25-30 ಎಕರೆ ಜಮೀನುಗಳಲ್ಲಿ ವ್ಯವಸಾಯ ಮಾಡುವವರಿಗೆ ತೊಂದರೆಯಾಗುತ್ತದೆ.
ಇನ್ನೂ ಶಿಥಿಲಗೊಂಡಿರುವ ವಿದ್ಯುತ್ ಕಂಬದಿಂದ ಅಪಾಯ ಉಂಟಾಗುವ ಸಾಧ್ಯತೆಗಳಿರುವುದರಿಂದ ಈ ಭಾಗದ ರೈತರು ಹಲವು ಎಕರೆ ಜಮೀನಿನ್ನು ಪಾಳು ಬೀಳಿಸಿದ್ದಾರೆ. ಇದಲ್ಲದೇ ಇದರ ಸನಿಹದಲ್ಲೇ ಆನೆ ಕಾರಿಡಾರ್ ಇದ್ದು, ಸುವರ್ಣಾವತಿ ಜಲಾಶಯದ ಹಿನ್ನೀರಿಗೆ ಬರುವ ಆನೆಗಳು ಸ್ವಲ್ಪ ಒತ್ತರಿಸಿದರೂ ಸಾಕು ಅವುಗಳ ಮೇಲೆಯೇ ವಿದ್ಯುತ್ ವೈರ್‌ಗಳು ಬಿದ್ದು, ಆನೆಗಳು ಬಲಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಈ ಸ್ಥಳದಲ್ಲಿ ಏನಾದರೂ ಪ್ರಾಣ ಹಾನಿಯಾದರೆ ಅದಕ್ಕೆ ಚೆಸ್ಕಾಂನವರೇ ನೇರ ಹೊಣೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…